ಹೊಸಪೇಟೆ: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳನ್ನು ಬದಲಿಸಿ ಹೊಸ ಗೇಟ್‌ಗಳ ಅಳವಡಿಕೆಗೆ ನ.22ರಂದು ತೆಲಂಗಾಣದ ಹೈದರಾಬಾದ್ ನಲ್ಲಿ ನಡೆಯುವ ಟಿಬಿಬಿ ಸಭೆಯಲ್ಲಿ ನರ‍್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಟಿಬಿಬಿ ಅಧ್ಯಕ್ಷ ಎಸ್. ಎನ್. ಪಾಂಡೆ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ರ‍್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇಂದ್ರರ‍್ಕಾರ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಗೇಟ್ ಬದಲಾವಣೆ ನರ‍್ಧಾರ ಆದರೆ ಮುಂದಿನ ಬೇಸಿಗೆಯಲ್ಲಿ ಹೊಸ ಗೇಟ್ ಅಳವಡಿಸಲು ಸಾಧ್ಯತೆ ಇದೆ ಎಂದು ಟಿಬಿಬಿ ಅಧಿಕಾರಿಗಳು ತಿಳಿಸಿದರು.
ತುಂಗಭದ್ರಾ ಜಲಾಶಯದಿಂದ ರ‍್ನಾಟಕದ ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳು ನೀರು ಪಡೆಯುತ್ತವೆ. ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಕೂಡ ನೀರು ಪಡೆಯುತ್ತವೆ. ಒಟ್ಟು 13 ಲಕ್ಷ ಎಕರೆ ಕೃಷಿ ಪ್ರದೇಶಕ್ಕೆ ಜಲಾಶಯ ನೀರು ಒದಗಿಸುತ್ತದೆ. ಆದರೆ, ಆ.10ರಂದು ರೈತರಿಗೆ ಜೀವನಾಡಿ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಳಚಿ ಬಿದ್ದು ಆತಂಕ ಮೂಡಿಸಿತು. ಡ್ಯಾಂ ಗೇಟ್ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಮಾಡಲಾಗಿದೆ. ಗೇಟ್ ಬದಲಾವಣೆಗೂ ಸಲಹೆ ನೀಡಿದರು.
ಈ ಹಿನ್ನೆಲೆಯಲ್ಲಿ ದಿಲ್ಲಿಯ ಪರಿಣತ ತಜ್ಞ ಎ.ಕೆ. ಬಜಾಜ್ ನೇತೃತ್ವದ ತಾಂತ್ರಿಕ ತಂಡ ಆಗಮಿಸಿ ಪರಿಶೀಲನೆ ನಡೆಸಿ, ಗೇಟ್‌ಗಳನ್ನು ಬದಲಿಸಲು ಸಲಹೆ ನೀಡಿದೆ. ಆದ್ದರಿಂದ ಹೈದರಾಬಾದ್ ನಲ್ಲಿನಡೆಯುವ ಟಿಬಿಬಿ ಸಭೆಯಲ್ಲಿ ಜಲಾಶಯದ ಕ್ರಸ್ಟ್‌ಗೇಟ್‌ಗಳ ಗಟ್ಟಿತನ ಅಧ್ಯಯನಕ್ಕಾಗಿ ಮತ್ತೋಮ್ಮೆ ಪರಿಣತ ಸಂಸ್ಥೆಯೊಂದಕ್ಕೆ ನೀಡಲು ತುಂಗಭದ್ರಾ ಮಂಡಳಿ ಸಭೆಯಲ್ಲಿ ಅನುಮೋದನೆ ದೊರೆಯಲಿದೆ. ಈ ಸಂಸ್ಥೆ ನೀಡುವ ವರದಿ ಆಧಾರದ ಮೇಲೆ ಜಲಾಶಯದ ಗೇಟ್ ಗಳನ್ನು ಬದಲಿಸುವ ಸಾಧ್ಯತೆ ಇದೆ.