ತುಂಗಭದ್ರಾ ಜಲಾಶಯ 
ಜಿಲ್ಲೆ

ಟಿ.ಬಿ.ಡ್ಯಾಂಗೆ 50 ಸಾವಿರ ಕ್ಯುಸೆಕ್‌ ಒಳಹರಿವು

ಮಂಜುನಾಥ

ಹೊಸಪೇಟೆ: ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು ಜೀವನಾಡಿ ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರಿ ಏರಿಕೆ ಕಂಡಿದ್ದು, ಜಲಾಶಯಕ್ಕೆ 50715 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ.

ಜಲಾಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಹಾಗೂ ತುಂಗಾ ಜಲಾಶಯದಿಂದ ನೀರು ಹೊರಬಿಟ್ಟಿರುವುದರಿಂದ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ದಾವಣಗೆರೆ, ಹರಿಹರ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ.

ತುಂಗಭದ್ರಾ ಜಲಾಶಯದ ಒಳ ಹರಿವು 50715 ಕ್ಯೂಸೆಕ್‌ ಇರುವ ಹಿನ್ನೆಲೆಯಲ್ಲಿ 105.788 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 18.249 ಟಿಎಂಸಿ ನೀರು ಈಗಾಗಲೇ ಸಂಗ್ರಹಗೊಂಡಿದೆ. ಕಳೆದ 24 ಗಂಟೆಯಲ್ಲಿ ಜಲಾಶಯಕ್ಕೆ 4.5 ಟಿಎಂಸಿ ನೀರು ಹರಿದು ಬಂದಿದೆ. ಇದೇ ರೀತಿ ಒಳಹರಿವು ಬಂದರೆ ಆದಷ್ಟು ಬೇಗ ಜಲಾಶಯ ಭರ್ತಿಯಾಗಲಿದೆ. ಜಲಾಶಯದ ಒಳ ಹರಿವು ಉತ್ತಮವಾಗಿರುವ ಹಿನ್ನೆಲೆಯಲ್ಲಿ ಜಲಾಶಯ ಬೇಗನೆ ತುಂಬುವ ಆಶಾಭಾವ ಕೂಡ ರೈತರಲ್ಲಿ ಒಡಮೂಡಿದೆ.