ಜಿಲ್ಲೆ

ತುಂಗಭದ್ರಾ ನದಿಪಾತ್ರದ ಜನರಿಗೆ ಎಚ್ಚರಿಕೆ

ಮಂಜುನಾಥ

ಹೊಸಪೇಟೆ: ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದರಿಂದ ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ತುಂಗಭದ್ರಾ ಆಡಳಿತ ಮಂಡಳಿ ಸೂಚನೆ ನೀಡಿದೆ.

ಜಲಾಶಯದ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಜಲಾಶಯ 1633 ಅಡಿಗೆ ಈಗಾಗಲೇ 1620.20 ಅಡಿ ಭರ್ತಿಯಾಗಿದೆ. ಶನಿವಾರ 61.889 ಟಿಎಂಸಿ ನೀರು ಸಂಗ್ರಹ ವಾಗಿದೆ. ತುಂಗಾ ಜಲಾಶಯದಿಂದ 41116 ಕ್ಯೂಸೆಕ್‌ ನೀರು ನದಿಗೆ ಬಿಡುಗಡೆಯಾಗಿದೆ‌. ವರದ ನದಿಯಿಂದಲೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಒಟ್ಟು ಜಲಾಶಯಕ್ಕೆ ಶನಿವಾರ ಬೆಳಗ್ಗೆ 8 ಗಂಟೆಗೆ 63816 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಹೊನ್ನಾಳಿ, ಭದ್ರಾವತಿ, ದಾವಣಗೆರೆ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಾಳೆಗೆ ಇನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಒಳ ಹರಿವಿನ ಪ್ರಮಾಣ ಭಾರಿ ಹೆಚ್ಚಳವಾಗಿದ್ದರಿಂದ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡಬಹುದು. ಆದ್ದರಿಂದ ನದಿಪತ್ರದ ಗ್ರಾಮಗಳ ಜನರಿಗೆ ಟಿಬಿಬಿ ಎಚ್ಚರಿಕೆ ನೀಡಿದೆ‌. ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ‌.