ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ನೂತನವಾಗಿ ಆಯ್ಕೆಯಾದ ಶಿಕ್ಷಕರಿಗಾಗಿ ಭಾನುವಾರ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಎಸ್.ಆಕಾಶ್ ಉದ್ಘಾಟಿಸಿದರು. ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಡಿಡಿಪಿಐ ಕೆ.ಡಿ.ಬಡಿಗೇರ, ಭಾರತ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಉಪಾಧ್ಯಕ್ಷ ಶುಭಂಕರ್ ಚಕ್ರವರ್ತಿ, ಜಿಲ್ಲಾ ಸಂಚಾಲಕ ಸೈಯದ್ ಹಫೀಜುಲ್ಲಾ, ಜಿಲ್ಲಾ ಶಿಕ್ಷಣ ಸಮನ್ವಯಾಕಾರಿ ಆರ್.ಇಂದಿರಾ, ಬಿಇಒ ಚಂದ್ರಶೇಖರ ರೆಡ್ಡಿ ಇದ್ದರು. 
ಜಿಲ್ಲೆ

ಮಕ್ಕಳಿಗೆ ಜೀವನದ ವೌಲ್ಯಗಳನ್ನು ತಿಳಿಸಿಕೊಡಿ

ರಾಯಚೂರು: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಪ್ರಾಥಮಿಕ ಶಿಕ್ಷಣ ಮುಂದಿನ ಶಿಕ್ಷಣದ ದಿಕ್ಸೂಚಿಯಾಗಿದ್ದು, ಶಿಕ್ಷಕರು ಗುಣಮಟ್ಟದ ಶಿಕ್ಷಣದ ಜತೆಗೆ ಮಕ್ಕಳಿಗೆ ಜೀವನದ ವೌಲ್ಯಗಳು, ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುವ ಕೆಲಸ ಮಾಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಎಸ್.ಅಕಾಶ್ ಹೇಳಿದರು.
ಸ್ಥಳೀಯ ಕೃಷಿ ವಿಜ್ಞಾನ ವಿವಿ ಪ್ರೇಕ್ಷಾಗೃಹದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಭಾರತ ಜ್ಞಾನವಿಜ್ಞಾನ ಸಮಿತಿಯಿಂದ ನೂತನವಾಗಿ ನೇಮಕಗೊಂಡ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ಭಾನುವಾರ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಪ್ರಾಥಮಿಕ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಅವರ ಮುಂದಿನ ಜೀವನದ ಆಯ್ಕೆ ಮಾಡುವ ಹಂತವಾಗಿದ್ದು, ಶಿಕ್ಷಕರು ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಮೂಲಕ ಮಕ್ಕಳಿಗೆ ಉತ್ತಮ ಮಾರ್ಗದರ್ಶನ ನೀಡುವ ಕೆಲಸ ಮಾಡಬೇಕು ಎಂದರು.
ಶಿಕ್ಷಕರು ನೀಡಿದ ಮಾರ್ಗದರ್ಶನ ಮತ್ತು ಅವರ ಆಶಯದಂತೆ ನಾನು ಇಂದು ಐಎಎಸ್ ಅಕಾರಿಯಾಗಲು ಸಾಧ್ಯವಾಗಿದೆ. ಶಿಕ್ಷಕ ತನ್ನ 35 ವರ್ಷದ ಸೇವಾ ಅವಯಲ್ಲಿ 70 ಸಾವಿರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಾಧ್ಯವಾಗುತ್ತಿದೆ. ಆಯ್ಕೆಯಾಗಿರುವ 702 ಶಿಕ್ಷಕರು ಎಷ್ಟು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಾಧ್ಯವಾಗುತ್ತದೆ ಎನ್ನುವುದನ್ನು ಯೋಚಿಸಬೇಕು.
ಎಸ್ಸೆಸ್ಸೆಲ್ಸಿ ಲಿತಾಂಶದಲ್ಲಿ ಕಲ್ಯಾಣ ಕರ್ನಾಟಕದ ಲಿತಾಂಶ ತೃಪ್ತಿದಾಯಕವಾಗಿದ್ದ. ಅದನ್ನು ಉತ್ತಮಗೊಳಿಸುವುದಕ್ಕೆ ನೀವು ಹತ್ತು ವರ್ಷದ ಯೋಜನೆಯನ್ನು ರೂಪಿಸುವ ಮೂಲಕ ಲಿತಾಂಶದಲ್ಲಿ ಹೆಚ್ಚಳ ಮಾಡಲು ಪ್ರಯತ್ನಿಸಬೇಕು ಎಂದು ಡಾ.ಎಸ್.ಆಕಾಶ್ ಹೇಳಿದರು.
ಜಿಲ್ಲಾಕಾರಿ ಚಂದ್ರಶೇಖರ ನಾಯಕ ಮಾತನಾಡಿ, ಶಿಕ್ಷಕರು ತಾವು ಬೋಸುವಂತಹ ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಬೇಕು. ಜಿಲ್ಲೆಯ 64 ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗ್ರಂಥಾಲಯ ವ್ಯವಸ್ಥೆಯಿದ್ದು ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಡಿಡಿಪಿಐ ಕೆ.ಡಿ.ಬಡಿಗೇರ ಮಾತನಾಡಿ, ಶಿಕ್ಷಣ ಇಲಾಖೆ ಎಲ್ಲ ಇಲಾಖೆಗಳಿಗೆ ತಾಯಿ ಬೇರು ಇದ್ದಂತೆ, ಶಿಕ್ಷಕರು ಉತ್ತಮ ರೀತಿಯಲ್ಲಿ ಬೋಧನೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ಮಾಡಬೇಕು. ಜತೆಗೆ ನಿಮ್ಮ ಆರೋಗ್ಯದ ಬಗ್ಗೆಯೂ ಗಮನ ಹರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಉಪಾಧ್ಯಕ್ಷ ಶುಭಂಕರ್ ಚಕ್ರವರ್ತಿ, ಜಿಲ್ಲಾ ಸಂಚಾಲಕ ಸೈಯದ್ ಹಫೀಜುಲ್ಲಾ, ಜಿಲ್ಲಾ ಶಿಕ್ಷಣ ಸಮನ್ವಯಾಕಾರಿ ಆರ್.ಇಂದಿರಾ, ಬಿಇಒ ಚಂದ್ರಶೇಖರ ರೆಡ್ಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಮಹಾಂತೇಶ ಬಿರಾದರ ಉಪಸ್ಥಿತರಿದ್ದರು.