ಕುಶಾಲನಗರ:
ಕುಶಾಲನಗರ ತಾಲೂಕು ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಜೂನ್ ಅಂತ್ಯಕ್ಕೆ ಸೇವಾ ನಿವೃತ್ತಿ ಹೊಂದಿದ ಶಿಕ್ಷಕಿ ಎ. ಭೋಜಮ್ಮ ಅವರನ್ನು ಶಾಲೆಯ ಸಿಬ್ಬಂದಿ ಹಾಗೂ ಎಸ್.ಡಿ.ಎಂ.ಸಿ. ವತಿಯಿಂದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ವೇಳೆ ಮಾತನಾಡಿದ ಸಂಪಾಜೆ ಕಂದಾಯ ಹೋಬಳಿಯ ಪ್ರಭಾರ ಉಪ ತಹಸೀಲ್ದಾರ್ ಬಿ.ಜೆ. ವೆಂಕಟೇಶ್, ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳ ಪ್ರಗತಿಗೆ ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು. ಸದಾ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ವಿದ್ಯಾರ್ಥಿ ವೃಂದ ಹಾಗೂ ಸಿಬ್ಬಂದಿಗಳ ಪ್ರೀತಿಗೆ ಶಿಕ್ಷಕಿ ಭೋಜಮ್ಮ ಪಾತ್ರರಾಗಿರುವುದು ಹೆಮ್ಮೆಯ ಸಂಗತಿ ಎಂದರು.
ಕೂಡಿಗೆ ಕ್ಲಸ್ಟರ್‌ನ ಸಿ.ಆರ್.ಪಿ. ಕೆ. ಶಾಂತಕುಮಾರ್ ಮಾತನಾಡಿ, ಶಿಕ್ಷಕಿ ಭೋಜಮ್ಮ ಅವರು ಶಾಲೆಗೆ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದು, ಶಾಲೆಯಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಾಣವಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕ್ಷಕರು ಉತ್ತಮ ಸೇವೆ ಸಲ್ಲಿಸಿದಾಗ ಸಮಾಜವು ಶಿಕ್ಷಕರ ಬಗ್ಗೆ ಹೆಮ್ಮೆ ಪಡುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್. ಸುಜಾತ, ಶಿಕ್ಷಕಿ ಭೋಜಮ್ಮ ಅವರು ಮಕ್ಕಳ ಅಚ್ಚು ಮೆಚ್ಚಿನ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಪೋಷಕರ ಪ್ರೀತಿ ಪಾತ್ರರಾಗಿದ್ದಾರೆ ಎಂದು ಶ್ಲಾಘಿಸಿದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಉತ್ತಮ ಶಿಕ್ಷಕರು ಇರುವ
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಮೂಲಕ ಹೆಚ್ಚಿನ ಜ್ಞಾನ ಪಡೆಯಲು ಸಾಧ್ಯ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕಿ ಎ. ಭೋಜಮ್ಮ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಂತೋಷ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಉಪಾಧ್ಯಕ್ಷೆ ಪವಿತ್ರ, ಸದಸ್ಯರಾದ ಪೂಜಾ, ಅರ್ಪಿತ, ಹÀರೀಶ್, ಶಾಹಿನ, ಮಂಜುನಾಥ್, ಸಂಪಾಜೆಯ ಪೆರುಮುಂಡ ಮನು, ಪ್ರಸಾದ್ ಪೂಜಾರಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಡಿ.ವಿ.ಗಣೇಶ್, ಪ್ರಾಥಮಿಕ ಶಾಲೆಯ ಹಾಗೂ ಪ್ರೌಢಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ಶಿಕ್ಷಕರ ಸಂಘದಿAದ ಸನ್ಮಾನ:
ಇದಕ್ಕೂ ಮೊದಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪರವಾಗಿ ಸಂಘದ ಜಿಲ್ಲಾಧ್ಯಕ್ಷ ಎಚ್.ಎನ್. ಮಂಜುನಾಥ್, ತಾಲೂಕು ಘಟಕದ ಅಧ್ಯಕ್ಷ ಟಿ.ಕೆ.ಬಸವರಾಜ್, ಪದಾಧಿಕಾರಿಗಳಾದ ಟಿ.ಎಸ್. ಶಶಿಕುಮಾರ್, ದೇವಾನಂದ ಇತರರು ಶಿಕ್ಷಕರ ಸಂಘದಿAದ ಸನ್ಮಾನ ನೆರವೇರಿಸಿದರು.