ಜಿಲ್ಲೆ

ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ನಾಗೇಶ ಎಸ್

ಹುಣಸೂರು: ನಗರದಲ್ಲಿ ಸೆ.11ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ ತಿಳಿಸಿದರು.

ಬೆಳಗ್ಗೆ ನಗರದ ಮುನೇಶ್ವರ ಕಾವಲ್ ಮೈದಾನದಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರವನ್ನೊಳಗೊಂಡ ಭವ್ಯ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗುರುಭವನ ತಲುಪಲಿದೆ. ನಂತರ ಗುರುಭವನದ ಆವರಣದಲ್ಲಿ ಆಯೋಜನೆಗೊಂಡಿರುವ ವೇದಿಕೆ ಕಾರ್ಯಕ್ರಮವನ್ನು ಶಾಸಕ ಜಿ.ಡಿ.ಹರೀಶ್‌ಗೌಡ ಉದ್ಘಾಟಸಲಿದ್ದಾರೆ. ಮೈಸೂರು ವಿವಿಯ ನಿವೃತ್ತ ಆಂಗ್ಲ ಪ್ರಾಧ್ಯಾಪಕ ಪ್ರೊ.ನಾಗಣ್ಣ ಪ್ರಧಾನ ಭಾಷಣ ಮಾಡಲಿದ್ದಾರೆ. ನಿವೃತ್ತಿ ಹೊಂದಿದ ಶಿಕ್ಷಕರನ್ನು ಸನ್ಮಾನಿಸಲಾಗುವುದು. ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ಬಿ.ಶಶಿಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ರಂಗಸ್ವಾಮಿ, ಉಪಾಧ್ಯಕ್ಷ ಎಚ್.ಬಿ.ಚನ್ನವೀರಪ್ಪ, ಪ್ರಧಾನಕಾರ್ಯದರ್ಶಿ ಪ್ರಸನ್ನಕುಮಾರ್ ಇದ್ದರು.