ಜಿಲ್ಲೆ

ಕಾಯಕಯೋಗಿ ಪ್ರಶಸ್ತಿ

ಹುಬ್ಬಳ್ಳಿ: ತಾಲೂಕಿನ ಕುರಡಿಕೇರಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಸಹ ಶಿಕ್ಷಕಿ ರಾಜಶ್ರೀ ಬೀಡಿ ರಾಜ್ಯ ಮಟ್ಟದ ಕಾಯಕ ಯೋಗಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದೊಡ್ಡಬಳ್ಳಾಪುರದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಇತ್ತೀಚೆಗೆ ಬಾಗಲಕೋಟೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ತೋರಿದ ಸಾಧನೆ, ಶಿಕ್ಷಣ ಕ್ಷೇತ್ರದಲ್ಲಿನ ಕಾರ್ಯ ಪ್ರವೃತ್ತಿ, ಕಾಯಕ ನಿಷ್ಠೆಯನ್ನು ಪರಿಗಣಿಸಿ ರಾಜಶ್ರೀ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.