ಜಿಲ್ಲೆ

ಸಂಗೀತ ಕಲಿಸುವ ನೆಪದಲ್ಲಿ ಅಪ್ರಾಪ್ತ ಮೇಲೆ ಅತ್ಯಾಚಾರ ಮಾಡಿದ ಶಿಕ್ಷಕ

ಮಾಗಡಿ: ಸಂಗೀತ ಕಲಿಸುವ ನೆಪದಲ್ಲಿ ಬಾಲಕಿ ಮೇಲೆ ಸಂಗೀತ ಶಿಕ್ಷಕನೇ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಪಟ್ಟಣದಲ್ಲಿ ಸಂಗೀತ ಕಲಿಸುವ 48 ವರ್ಷದ ಶಿಕ್ಷಕ 17 ವರ್ಷದ ಅಪ್ರಾಪ್ತೆ ಮೇಲೆ ಸತತವಾಗಿ ಅತ್ಯಾಚಾರ ಎಸಗಿದ್ದಾನೆ. ವಿದ್ಯಾರ್ಥಿನಿ ಶಾಲೆಯಲ್ಲಿ ಹೊಟ್ಟೆ ಹಿಡಿದುಕೊಂಡು ಒದ್ದಾಡುತ್ತಿದ್ದಾಗ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಪಾಸಣೆ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಈ ಸ್ಥಿತಿಗೆ ಕಾರಣ ಯಾರೆಂದು ಕೇಳಿದಾಗ ಆಕೆ ಸಂಗೀತ ಶಿಕ್ಷಕನ ಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾಳೆ.

ಬಾಲಕಿ ಹೇಳಿಕೆ ಪಡೆದ ಬಳಿಕ ಆರೋಪಿ ಶಿಕ್ಷಕನನ್ನು ಮಾಗಡಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ವಿದ್ಯಾರ್ಥಿನಿಯನ್ನು ಲೈಂಗಿಕತೆಗೆ ಸಂಗೀತ ಶಿಕ್ಷಕ ಬಳಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಬಾಲಕಿಯ ವಿಶೇಷ ಕಾಳಜಿಗೆ ವೈದ್ಯರು ಸಲಹೆ ನೀಡಿದ್ದಾರೆ. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.