ವಿಜಯವಾಣಿ ಸುದ್ದಿಜಾಲ ಧಾರವಾಡ
ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠದ ನಿರಂಜನ ಸಭಾಂಗಣದಲ್ಲಿ ಭಾಷಾ ಅಲ್ಪಸಂಖ್ಯಾತ ಪ್ರಾಥಮಿಕ ಶಾಲಾ ಕನ್ನಡ ಶಿಕ್ಷಕರ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಧಾರವಾಡ ಮಾದಾರಮಡ್ಡಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆತ್ಮಾನಂದ ಗದ್ದಿಕೇರಿ ಅವರಿಗೆ ಶಿಕ್ಷಕರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.