ಬೇಲೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಬೇಲೂರು ತಾಲೂಕಿನ ಬೆಳ್ಳಾವರ ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆ ಶಿಕ್ಷಕ ವೈ.ಜಿ.ರಾಮೇಗೌಡ ಅವರು ಡಿಸ್ಕಸ್ ಎಸೆತದಲ್ಲಿ ಪ್ರಥಮ, ಶಾಟ್‌ಪುಟ್ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಗಸ್ಟ್ 17 ರಿಂದ 20ರ ವರೆಗೆ ಆಯೋಜಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಬೇಲೂರು ತಾಲೂಕಿನ ಬೆಳ್ಳಾವರ ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆ ಶಿಕ್ಷಕ ವೈ.ಜಿ.ರಾಮೇಗೌಡರು ಪಾಳ್ಗೊಂಡಿದ್ದರು.
ಇವರು ಸತತವಾಗಿ ಡಿಸ್ಕಸ್ ಹಾಗೂ ಶಾಟ್‌ಪುಟ್ ಎಸೆತದಲ್ಲಿ ಸತತವಾಗಿ ನಾಲ್ಕು ವರ್ಷದಿಂದ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಅಲ್ಲಿಯೂ ಹಲವಾರು ಪ್ರಶಸ್ತಿ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಇವರ ಸಾಧನೆಗೆ ಶಾಲೆಯ ಶಿಕ್ಷಕರು, ಗ್ರಾಮಸ್ಥರು ಹಾಗೂ ಬೇಲೂರಿನ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.