ಹುಬ್ಬಳ್ಳಿ: ಇಲ್ಲಿಯ ಪ್ರಾಥಮಿಕ ಶಾಲೆ ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಅಧ್ಯಕ್ಷರಾಗಿ ನಿಂಗಪ್ಪ ನಾಗರಳ್ಳಿ, ಉಪಾಧ್ಯಕ್ಷರಾಗಿ ಗದಿಗೆಪ್ಪ ಕುಬಿಹಾಳ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಅಧಿಕಾರಿ ಎಂ.ಎಸ್. ಶಿವಳ್ಳಿಮಠ ತಿಳಿಸಿದ್ದಾರೆ.
ಸಂಘದ ನೂತನ ಪದಾಧಿಕಾರಿಗಳಿಗೆ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಸಂಘದ ಮಾಜಿ ಅಧ್ಯಕ್ಷ ಪಿ.ಎಂ. ತಟ್ಟಿಮನಿ, ತಾಲೂಕು ನೌಕರರ ಸಂಘದ ಅಧ್ಯಕ್ಷ ಡಾ. ಪ್ರಲ್ಹಾದ ಗೆಜ್ಜಿ, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಶಹರ ಅಧ್ಯಕ್ಷ ಎಂ.ಎಚ್. ಜಂಗಳಿ, ಸಂಘದ ಮಾಜಿ ಅಧ್ಯಕ್ಷ ಎಂ.ಯು. ಶಿರಹಟ್ಟಿ, ಇತರರು ಪಾಲ್ಗೊಂಡಿದ್ದರು.