ಜಿಲ್ಲೆ

ಕಾಳಗಿಯಲ್ಲಿ ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ ನಾಳೆ

ಕಾಳಗಿ: ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗೆ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಹಾಂತೇಶ ಪಂಚಾಳ ತಿಳಿಸಿದ್ದಾರೆ.

ಶ್ರೀ ನೀಲಕಂಠ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬೆಳಗ್ಗೆ 11ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ರಾಜ್ಯ ಸರ್ಕಾರಿ ನೌಕರರ ಸಂಘ, ರಾಜ್ಯ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದಿಂದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ, ಸೇವಾ ರತ್ನ ಪ್ರಶಸ್ತಿ ಪ್ರದಾನ, ನಿವೃತ್ತ ಶಿಕ್ಷಕರಿಗೆ ಗೌರವ ಕಾರ್ಯಕ್ರಮ ಹಮಿಕೊಳ್ಳಲಾಗಿದೆ. ಶಾಸಕ ಡಾ.ಅವಿನಾಶ ಜಾಧವ್ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.