ಜಿಲ್ಲೆ

ಸನಾ ಕಾಲೇಜಿನಲ್ಲಿ ಶಿಕ್ಷಕರಿಗೆ ಸನ್ಮಾನ

Dharwada - Basavaraj Idli

ಹುಬ್ಬಳ್ಳಿ: ಇಲ್ಲಿಯ ಭೈರಿದೇವರಕೊಪ್ಪ ಶಾಂತಿನಿಕೇತನದಲ್ಲಿರುವ ಸನಾ ಗ್ರೂಪ್ ಆಫ್ ಇನ್ ಸ್ಟಿಟ್ಯೂಟ್ ನಲ್ಲಿ ಸಾಧಕ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸೆ. 10ರಂದು ಮಧ್ಯಾಹ್ನ 3.30ಕ್ಕೆ ಹಮ್ಮಿಕೊಳ್ಳಲಾಗಿದೆ.

ಅವಳಿನಗರದ 40 ಶಾಲೆ, ಕಾಲೇಜುಗಳ ಶಿಕ್ಷಕರು, ಪ್ರಾಂಶುಪಾಲರು ಪಾಲ್ಗೊಳ್ಳಲಿದ್ದು, ಅತ್ಯುತ್ತಮ ಶಿಕ್ಷಕ ಹಾಗೂ ಜೀವನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಚೇರ್ಮನ್ ಎಂ.ಎಂ. ಮಳಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಎ.ಜೆ. ಅಕಾಡೆಮಿ ಸಂಸ್ಥಾಪಕ ನಿರ್ದೇಶಕ ಮುಹಮ್ಮದ ಅಬ್ದುಲ್ಲಾ ಜಾವಿದ್, ಸಾಜಿದಾ ಲಾಲ್ಮಿಯಾ, ಅಶ್ರಫ್ ಅಲಿ, ಬಶೀರ್ ಅಹ್ಮದ್, ಇತರರು ಪಾಲ್ಗೊಳ್ಳಲಿದ್ದಾರೆ.