ಹುಬ್ಬಳ್ಳಿ: ಇಲ್ಲಿನ ಉಣಕಲ್ಲ್ ಕ್ರಾಸ್ನಲ್ಲಿರುವ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಾಗದಲ್ಲಿ ಶಿಕ್ಷಕರ ಸಭಾಭವನ ನಿರ್ವಣಕ್ಕಾಗಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾನುವಾರ ಭೂಮಿ ಪೂಜೆ ನೆರವೇರಿಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಶಿಕ್ಷಕರ ಸಭಾ ಭವನದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಶಿಕ್ಷಕರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ತಾವು ನಡೆದು ಬಂದ ಹಾದಿ ಹಾಗೂ ಶಿಕ್ಷಕರ ಹೋರಾಟದ ಕುರಿತು ಹೊರಟ್ಟಿ ಅಭಿಪ್ರಾಯಗಳನ್ನು ಹಂಚಿಕೊಂಡರು.
ಶಾಸಕ ಎನ್.ಎಚ್. ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಪ್ರೊ.ಎಸ್.ವಿ. ಸಂಕನೂರ, ಹುಡಾ ಮಾಜಿ ಅಧ್ಯಕ್ಷ ರಾಜಾ ದೇಸಾಯಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್, ಸಂಘಟನಾ ಕಾರ್ಯದರ್ಶಿ ಶ್ಯಾಮ ಮಲ್ಲನಗೌಡರ, ಬಿ.ಕೆ. ಮಳಗಿ, ಶ್ರೀನಿವಾಸ ವಾಲಿ ಇತರರು ಇದ್ದರು.