ಕಾರವಾರ: ಖಾಸಗಿ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಯ ವೇತನ, ನಿವೃತ್ತಿ ವೇತನ ವಿಧೇಯಕವನ್ನು ರದ್ದುಪಡಿಸುವಂತೆ ಆಗ್ರಹಿಸಿ ಅನುದಾನ ರಹಿತ ಪಿಂಚಣಿ ವಂಚಿತರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ ನೂರಕ್ಕೂ ಹೆಚ್ಚು ಶಿಕ್ಷಕರು ಆಗಮಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಘೋಷೊಷಿಸಿದಂತೆ ಒಪಿಎಸ್ ಜಾರಿಗೆ ತರಬೇಕು.
2004 ಏಪ್ರಿಲ್ ಪೂರ್ವ ನೇಮಕಗೊಂಡವರಿಗೆ ಹಳೆಯ ನಿಶ್ಚಿತ ಪಿಂಚಣಿ ನೀಡಬೇಕು., ಸರ್ಕಾರಿ ನೌಕರರಿಗೆ ನೀಡುವಂತೆ ಅನುದಾನಿತ ನೌಕರರಿಗೂ ವೈದ್ಯಕೀಯ ಸೌಲಭ್ಯಗಳ ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.
ಪ್ರೌಢಶಾಲೆ, ಪದವಿ ಪೂರ್ವ ಶಾಲೆಗಳಲ್ಲಿ 2020 ರ ಡುಸೆಂಬರ್ 30 ರ ಪೂರ್ವ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿಸಿದ್ದನ್ನು ಸ್ವಾಗತಿಸುತ್ತೇವೆ ಎಂದು ಮನವಿಯಲ್ಲಿ ತಿಳಿದ ಮಾಗಿದೆ.
ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಭಟ್ , ಜಿಲ್ಲಾ ಉಪಾಧ್ಯಕ್ಷ ಎಂ. ರಾಜಶೇಖರ, ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಜೈ ರಂಗನಾಥ್ ಉಪಸ್ಥಿತರಿದ್ದರು.