ಜಿಲ್ಲೆ

ಮಕ್ಕಳ ಭವಿಷ್ಯ ರೂಪಿಸಲಿದ್ದಾರೆ ಶಿಕ್ಷಕರು

ಪ್ರಸಿನ್ ಕೆ.ಆರ್

ಹಾಸನ: ನಗರದ ಎಸ್‌ಆರ್‌ಎಸ್ ಪ್ರಜ್ಞಾ ವಿದ್ಯಾಶಾಲೆಯಲ್ಲಿ ಶುಕ್ರವಾರ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಸಂಸ್ಥೆ ಅಧ್ಯಕ್ಷ ರಾಜಗೋಪಾಲ ಶೆಟ್ಟಿ ಪುಷ್ಪಾರ್ಚನೆ ಮಾಡಿ ಮಾತನಾಡಿ, ಮೊದಲ ಉಪ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಮಕ್ಕಳ ಭವಿಷ್ಯವನ್ನು ರೂಪಿಸಲು ಪಠ್ಯ ಬೋಧನೆ ಜತೆಗೆ ವಿದ್ಯಾರ್ಥಿಗಳಲ್ಲಿ ವಿವೇಕ, ತಾಳ್ಮೆ, ದೂರದೃಷ್ಟಿ, ಮಾನವೀಯತೆಯನ್ನು ಬೋಧಿಸಿ, ತನ್ಮೂಲಕ ವಿದ್ಯಾರ್ಥಿಗಳನ್ನು ದೇಶದ ಸತ್ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಅವರನ್ನು ಈ ಮೂಲಕ ಸ್ಮರಿಸಲಾಗುತ್ತಿದೆ ಎಂದು ತಿಳಿಸಿದರು.

ಶಿಕ್ಷಕರಿಗೆ ಆಯೋಜಿಸಿದ್ದ ವಿವಿಧ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕರಿಗಾಗಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ವಿದ್ಯಾರ್ಥಿಗಳೇ ವ್ಯವಸ್ಥಿತವಾಗಿ ಸಂಘಟಿಸಿ ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು. ಸಂಸ್ಥೆ ಕಾರ್ಯದರ್ಶಿ ಎಂ.ನಟರಾಜ್, ಟ್ರಸ್ಟಿ ಆಶಾ ನಟರಾಜ್ ಇತರರು ಇದ್ದರು.