ಪಿರಿಯಾಪಟ್ಟಣ ತಾಲೂಕಿನ ಮಾಲಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರನಕಟ್ಟೆ ಹಾಡಿಯ ಗಿರಿಜನ ನಿವಾಸಿಗಳಿಗೆ ಕಡ್ಡಾಯ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಡಾ.ಆರ್.ಆಶಾ, ಗೋಪಾಲ್, ಶಂಕರ್, ಕಾವೇರಿ, ಜಯಮ್ಮ, ಕಮಲಾಕ್ಷಿ, ದಿವ್ಯಾ ಇದ್ದರು. 
ಜಿಲ್ಲೆ

ಗಿರಿಜನರಿಗೆ ಕಡ್ಡಾಯ ಮತದಾನ ಪ್ರತಿಜ್ಞಾವಿಧಿ ಬೋಧನೆ

ಲೋಕೇಶ್ ಮನು. ಡಿ

ಪಿರಿಯಾಪಟ್ಟಣ: ತಾಲೂಕಿನ ಮಾಲಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೋರನಕಟ್ಟೆ ಹಾಡಿಯ ಗಿರಿಜನ ನಿವಾಸಿಗಳಿಗೆ ಕಡ್ಡಾಯ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು.


ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಾ.ಆರ್.ಆಶಾ ಮಾತನಾಡಿ, ಮತದಾನ ನಮ್ಮೆಲ್ಲರ ಸಂವಿಧಾನಬದ್ಧ ಹಕ್ಕಾಗಿದ್ದು, ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಬೇಕು ಎಂದು ಮನವಿ ಮಾಡಿದರು.


ಪ್ರತಿಯೊಂದು ಮತವೂ ಮಹತ್ವದ್ದಾಗಿದ್ದು, ಯಾವುದೇ ಹಣ, ಆಮಿಷಗಳಿಗೆ ಒಳಗಾಗದೆ ನಿಷ್ಪಕ್ಷಪಾತವಾಗಿ ಮತದಾನ ಮಾಡಬೇಕು. ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಪೂರ್ಣ ಹಕ್ಕು ಮತದಾರರಿಗಿದ್ದು, ವಿವೇಚನೆಯಿಂದ ಮತದಾನ ಮಾಡಬೇಕು ಎಂದು ಸಲಹೆ ನೀಡಿದರು.

ಮುಖಂಡರಾದ ಗೋಪಾಲ್, ಶಂಕರ್, ಕಾವೇರಿ, ಜಯಮ್ಮ, ಕಮಲಾಕ್ಷಿ, ದಿವ್ಯಾ ಇತರರು ಇದ್ದರು.