ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ
ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು. ಇಂದಿನ ಮಕ್ಕಳಿಗೆ ಇತಿಹಾಸದ ಮಾಹಿತಿ ಕೊರತೆಯಿದ್ದು, ತರಗತಿಗಳಲ್ಲಿ ಪಠ್ಯದೊಂದಿಗೆ ಪುರಾಣ, ಧಾರ್ಮಿಕ ಗ್ರಂಥಗಳ ಪಠಿಸಬೇಕು ಎಂದು ಮಹಾಬಲೇಶ್ವರ ಐತಾಳ್ ಉಪ್ಪುಂದ ಹೇಳಿದರು.
ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಆಶ್ರಯದಲ್ಲಿ ಬಿಲ್ಲವರ ಹಿತರಕ್ಷಣಾ ವೇದಿಕೆ ಸಹಯೋಗದೊಂದಿಗೆ ಗಂಗೊಳ್ಳಿಯ ಎಸ್.ವಿ ಹಿರಿಯ ಪ್ರಾಥಮಿಕ ಶಾಲೆಯ ಟಿ.ವಿಮಲಾ ಪೈ ಸಭಾಂಗಣದಲ್ಲಿ ಶನಿವಾರ ಅಜಿತ್ ಕುಮಾರ ಪುಣ್ಯತಿಥಿ ಸೇವಾ ದಿನಾಚರಣೆ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿ ಮಾತನಾಡಿದರು.
ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಮಾಜಸೇವಕ ಆನಂದ ಬಿಲ್ಲವ ಅವರನ್ನು ಗೌರವಿಸಲಾಯಿತು. ಬಿಲ್ಲವರ ಸಮಾಜ ಸೇವಾ ಸಂಘ ಅಧ್ಯಕ್ಷ ಗೋಪಾಲ ಬಿಲ್ಲವ, ಬಿಲ್ಲವರ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ಜಿ.ಆರ್.ಲಕ್ಷ್ಮಣ ಪೂಜಾರಿ, ಪ್ರೇಮಾ ಮತ್ತು ರತ್ನಾ ಉಪಸ್ಥಿತರಿದ್ದರು.
ಶಿಶು ಮಂದಿರ ಅಧ್ಯಕ್ಷ ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಸಂಚಾಲಕ ಡಾ.ಕಾಶೀನಾಥ ಪೈ ಪ್ರಸ್ತಾವನೆಗೈದರು. ಶಿಶು ಮಂದಿರದ ಸದಸ್ಯರಾದ ಭಾಸ್ಕರ ಎಚ್.ಜಿ, ಸವಿತಾ ಯು.ದೇವಾಡಿಗ, ಬಿ.ಲಕ್ಷ್ಮೀಕಾಂತ ಮಡಿವಾಳ, ವಿಜಯಶ್ರೀ ವಿ.ಆಚಾರ್ಯ, ವಸಂತಿ ಖಾರ್ವಿ ಅತಿಥಿಗಳನ್ನು ಗೌರವಿಸಿದರು. ಶಿಶು ಮಂದಿರದ ಕಾರ್ಯದರ್ಶಿ ಅಶ್ವಿತಾ ಜಿ.ಪೈ ವಂದಿಸಿದರು. ನರೇಂದ್ರ ಎಸ್.ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.