ಹುಬ್ಬಳ್ಳಿ: ಅಂತಾರಾಷ್ಟ್ರೀಯ ಮಾದಕವಸ್ತು ಸೇವನೆ ಮತ್ತು ಅಕ್ರಮ ಮಾದಕ ವಸ್ತು ಕಳ್ಳಸಾಗಣೆ ವಿರೋಧಿ ದಿನ ನಿಮಿತ್ತ ಹು-ಧಾ ಪೊಲೀಸ್ ಆಯುಕ್ತಾಲಯದ ಎಲ್ಲ ಠಾಣೆಗಳ ಸಿಬ್ಬಂದಿಯಿಂದ ನಗರದಲ್ಲಿ ಬುಧವಾರ ಜಾಗೃತಿ ಮೂಡಿಸಲಾಯಿತು.
ನಗರದ ಎಲ್ಲ ಶಾಲಾ-ಕಾಲೇಜ್ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ, ಡ್ರಗ್ಸ್ ಮುಕ್ತ ಸಮಾಜ ನಿರ್ಮಿಸುವ ಧ್ಯೇಯೋದ್ದೇಶವನ್ನು ಒಳಗೊಂಡ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. 89 ಶಾಲಾ-ಕಾಲೇಜ್‌ಗಳ 16 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.