ತುಮಕೂರು: ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕ ಮಾಡಿಕೊಳ್ಳುವ ಅಧಿಕಾರವನ್ನು ವಿಶ್ವವಿದ್ಯಾಲಯಗಳಿಗೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.
ತುಮಕೂರು ವಿವಿ 17ನೇ ಟಿಕೋತ್ಸವದಲ್ಲಿ ಬುಧವಾರ ಮಾತನಾಡಿದ ಅವರು, ವಿವಿಗಳಲ್ಲಿ ಉದ್ಯೋಗಾಧರಿತ ಕೌಶಲ ಸಂಬಂಧಿಸಿದ ಹೊಸ ಕೋರ್ಸ್ ಅನ್ನು 45 ಪ್ರಥಮ ಕಾಲೇಜುಗಳಲ್ಲಿ ಆರಂಭಿಸಿದ್ದು 1500 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇನ್ನೂ ಗುಣಮಟ್ಟದ ಶಿಕ್ಷಣದ ಜತೆಗೆ ವೃತ್ತಿ ಕೌಶಲಗಳನ್ನು ಕಲಿಸುವುದು ಉನ್ನತ ಶಿಕ್ಷಣ ಇಲಾಖೆಯ ಮುಖ್ಯ ಗುರಿಯಾಗಿದೆ. ಹಾಗಾಗಿ, ಪ್ರತಿಯೊಂದು ಪದವಿ ಕಾಲೇಜುಗಳ ಅಂತಿಮ ಸೆಮಿಸ್ಟಾರ್ ವಿದ್ಯಾರ್ಥಿಗಳಿಗೆ ಇಂರ್ಟನ್ಶಿಪ್ ಕಡ್ಡಾಯಗೊಳಿಸಿದ್ದು, ವಿದ್ಯಾರ್ಥಿವೇತನ ಸಹ ನೀಡುತ್ತಿದ್ದೇವೆ ಎಂದರು.
ನಮ್ಮ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೊಸ ಸ್ಪರ್ಶ ನೀಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದೇವೆ. ಉದ್ಯೋಗಾಧಾರಿತ ಶಿಕ್ಷಣಕ್ಕೆ ಒತ್ತು ಕೊಡಲು ಕೌಶಲ ಕೋರ್ಸ್ಗಳನ್ನು ಪದವಿ ಕಾಲೇಜುಗಳಲ್ಲಿ ಆರಂಭಿಸಲಾಗಿದೆ. ನಮ್ಮ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣದ ಗುಣಮಟ್ಟದ ಹೆಚ್ಚಿಸುವ ನಿಟ್ಟಿನಲ್ಲಿ ಬ್ರಿಟಿಷ್ ಕೌನ್ಸಿಲ್ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಜತೆ ಚರ್ಚೆ ನಡೆಸಿದ್ದೇವೆ. ಡಾ.ಎಂ.ಸಿ.ಸುಧಾಕರ್ ಉನ್ನತ ಶಿಕ್ಷಣ ಸಚಿವ