ಜಿಲ್ಲೆ

ಎಸ್‌ಡಿಎಂ ಕಾಲೇಜಿನಲ್ಲಿ ತಾಂತ್ರಿಕ ಸ್ಪರ್ಧೆ

ಸೌಮ್ಯ ಆರ್

ಬೆಳ್ತಂಗಡಿ: ಇಂಜಿನಿಯರ್ಸ್ ಡೇ ಪ್ರಯುಕ್ತ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದಿಂದ ಮಿನಿಬ್ರಿಡ್ಜ್ ಮಾಸ್ಟರ್ ಶೀರ್ಷಿಕೆಯಲ್ಲಿ ತಾಂತ್ರಿಕ ಸ್ಪರ್ಧೆ ಇತ್ತೀಚೆಗೆ ಆಯೋಜನೆಗೊಂಡಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಜಿರೆಯ ಇಂಜಿನಿಯರ್ ಐ ಕೇರ್ ಬಿಲ್ಡರ್ಸ್ ಮತ್ತು ಡೆವೆಲಪರ್ಸ್‌ನ ವಿದ್ಯಾಕುಮಾರ್ ಅವರು, ರಚನಾತ್ಮಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ ಹೆಚ್ಚಳವಾಗುತ್ತದೆ ಎಂದರು. ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ್ ಜೈನ್, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ತೃಪ್ತಿ ಶೆಟ್ಟಿ, ಕಾರ್ಯಕ್ರಮದ ಸಂಯೋಜಕ ಅಶ್ವಿನ್ ಮರಾಠೆ, ಎಸಿಸಿಇಐ ಪ್ರಮೋದ್ ಮತ್ತು ಚೇತನ್ ಉಪಸ್ಥಿತರಿದ್ದರು. ಉಪನ್ಯಾಸಕ ಈಶ್ವರ್ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.