ಜಿಲ್ಲೆ

ಅಕ್ರಮ ಮರಳುಗಾರಿಕೆ ಮೇಲೆ ತಹಸೀಲ್ದಾರ್ ದಾಳಿ

Mysuru - Desk - Yashavanth Kumar N

ಕೆ.ಆರ್.ಪೇಟೆ: ತಾಲೂಕಿನ ಬೂಕನಕೆರೆ ಹೋಬಳಿ ಹಾಗೂ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಹಾದುಹೋಗುವ ಹೇಮಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಮೇಲೆ ಮಂಗಳವಾರ ರಾತ್ರಿ ತಹಸೀಲ್ದಾರ್ ನಿಸರ್ಗಪ್ರಿಯ ದಾಳಿ ನಡೆಸಿ ಟ್ರಾೃಕ್ಟರ್ ವಶಕ್ಕೆ ಪಡೆದಿದ್ದಾರೆ.

ಕೂಡಲಕುಪ್ಪೆ, ಪಿಡಿಜಿ ಕೊಪ್ಪಲು ಸೇರಿ ವಿವಿಧೆಡೆ ದಾಳಿ ನಡೆಸಲಾಗಿದೆ. ದಾಳಿ ಮಾಹಿತಿ ತಿಳಿದು ಮರಳು ಗಣಿಗಾರಿಕೆ ನಡೆಸುವವರು ಸ್ಥಳದಿಂದ ಪರಾರಿಯಾಗಿದ್ದರು.

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು, ಮರಳು ಗಣಿಗಾರಿಕೆ ಮುಂದುವರಿದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭ ಪೊಲೀಸ್ ಸಿಬ್ಬಂದಿ ಜಾವಿದ್ ಇದ್ದರು.