ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಸಂವಿಧಾನ ಪೀಠಿಕೆಯ ಓದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನ. 
ಜಿಲ್ಲೆ

ಮಕ್ಕಳಿಗೆ ಸಂವಿಧಾನದ ಮೌಲ್ಯ ತಿಳಿಸಿ

ವಿರಾಜಪೇಟೆ : ಸಂವಿಧಾನದ ಮಹತ್ವ ಅರಿವಾಗಬೇಕಾದರೆ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಸಂವಿಧಾನದ ಮೌಲ್ಯವನ್ನು ತಿಳಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ತಿಳಿಸಿದರು.

ನಗರದ ಪುರಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ನಿರ್ದೇಶನದಂತೆ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಅಳವಡಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಸಂವಿಧಾನದ ಬಗ್ಗೆ ಜ್ಞಾನ ಹೆಚ್ಚಿಸುವ ಕಾರ್ಯಕ್ರಮಗಳಿಗೆ ಕ್ರಿಯಾಯೋಜನೆಯನ್ನು ಶಿಕ್ಷಣ ಇಲಾಖೆ ತಯಾರು ಮಾಡುತ್ತಿದೆ ಎಂದರು.

ಸರ್ವೋದಯ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಎಚ್.ಎಂ.ಗಿರೀಶ್ ಮಾತನಾಡಿ, ಭಾರತದಲ್ಲಿ ಮುಂದಿನ ಪೀಳಿಗೆ ಸಬಲೀಕರಣವಾಗಬೇಕಾದರೆ ಅವರಿಗೆ ಸಂವಿಧಾನದ ಸ್ಪಷ್ಟ ಅರಿವು ಇರಬೇಕು. ಭಾರತದ ಸಂವಿಧಾನ ಜನರಿಗೆ ಮೂಲಭೂತ ಹಕ್ಕುಗಳು ಹಾಗೂ ರಾಜ್ಯ ನೀತಿ ನಿರ್ದೇಶಕ ತತ್ವಗಳಡಿಯಲ್ಲಿ ಎಲ್ಲವನ್ನು ದಯಪಾಲಿಸಿದ್ದರೂ ಜನರಿಗೆ ಅದರ ಅರಿವು ಇಲ್ಲ. ಸಂವಿಧಾನದ ಶ್ರೇಷ್ಠತೆ ಒಂದು ದೇಶದ ಹಿತದೃಷ್ಟಿಯಿಂದ ಮುಖ್ಯ ಎಂದು ಅಭಿಪ್ರಾಯಪಟ್ಟರು.
ತಹಸೀಲ್ದಾರ್ ರಾಮಚಂದ್ರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕಮಾದಯ್ಯ, ಡಿವೈಎಸ್ಪಿ ಮೋಹನ್ ಕುಮಾರ್, ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಸಂವಿಧಾನ ಪೀಠಿಕೆಯನ್ನು ರಾಮಚಂದ್ರ ಬೋಧಿಸಿದರು. ಇಲಾಖೆ ಮುಖ್ಯಸ್ಥರು, ವಿವಿಧ ಸಂಘಟನೆಗಳ ಮುಖಂಡರು, ಶಿಕ್ಷಕರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

15ಠಿ-02-
ನಗರದ ಪುರಭವನದಲ್ಲಿ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮದಲ್ಲಿ ರಾಮಚಂದ್ರ ಸಂವಿಧಾನ ಪೀಠಿಕೆ ಬೋಧಿಸಿದರು. ಪ್ರಕಾಶ್, ಮೋಹನ್ ಕುಮಾರ್, ಪ್ರೀತಿ ಚಿಕ್ಕಮಾದಯ್ಯ, ಎಚ್.ಎಂ.ಗಿರೀಶ್ ಇತರರು ಇದ್ದರು.
=-------