ಜಿಲ್ಲೆ

ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

ಸುನಿಲ್ ಪೊನ್ನೇಟಿ

ಕುಶಾಲನಗರ:

ಇಲ್ಲಿನ ಶ್ರೀ ಗಣಪತಿ ದೇವಸ್ಥಾನ ಸೇವಾ ಸಮಿತಿ ಆಶ್ರಯದಲ್ಲಿ ಬಹು ಕೋಟಿ ವೆಚ್ಚದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ದೇವಸ್ಥಾನದ ಪ್ರಧಾನ ಆರ್ಚಕ ನಾಗೇಂದ್ರ ಬಾಬು, ವೇದ ಬ್ರಹ್ಮ ರಾಘವೇಂದ್ರ ಭಟ್, ಅರ್ಚಕರಾದ ಸುಬ್ರಹ್ಮಣ್ಯ ಭಟ್, ಯೋಗೇಶ್ ಭಟ್, ವ್ಯಾಸ ಭಟ್, ಸತ್ಯನಾರಾಯಣ ಭಟ್ ನೇತೃತ್ವದಲ್ಲಿ ದೇವಾಲಯದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳನ್ನು ಆಯೋಜಿಸಲಾಗಿತ್ತು. ಗಣಪತಿ ಪೂಜೆ, ಪುಣ್ಯಾಹ, ಋತ್ವಿಕ್ ವರಣ, 12 ಕಾಯಿ ಗಣ ಹೋಮ, ಮುಷ್ಠಿ ಕಾಣಿಕೆ ಸಮರ್ಪಣೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಪ್ರೇತಾ ಆಕರ್ಷಣೆ ಉಚ್ಛಾಟನೆ, ಹಾಗೂ ಅಘೋರ ಬಲಿ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಎಂ.ಕೆ. ದಿನೇಶ್, ಪ್ರಧಾನ ಕಾರ್ಯದರ್ಶಿ ಬಿ.ಕೆ. ಮುತ್ತಣ್ಣ, ಸಹ ಕಾರ್ಯದರ್ಶಿ ದೇವರಾಜ್ ಹಾಗೂ ಸಮಿತಿಯ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಭಕ್ತಾಧಿಗಳು ಪಾಲ್ಗೊಂಡಿದ್ದರು. ಸೋಮವಾರ (ಫೆ.10) ವೃಷಭ ಲಗ್ನದಲ್ಲಿ ಭೂಮಿ ಪೂಜೆ ನಡೆಯಲಿದೆ.