ಜಿಲ್ಲೆ

ರಥಬೀದಿಗೆ ಬಂದ ಬ್ರಹ್ಮರಥ - ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ

Mangaluru - Nishantha Narayana

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಹಿನ್ನಲೆಯಲ್ಲಿ ಸೋಮವಾರ ರಥ ಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತಂದು ನಿಲ್ಲಿಸಲಾಯಿತು.

ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಬ್ರಹ್ಮರಥಕ್ಕೆ ಪುಷ್ಪ, ಗಂಧ, ಬಿಲ್ವಪತ್ರೆ ಸಮರ್ಪಿಸಿ ಪ್ರಾರ್ಥಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಅರ್ಚಕರು ತೆಂಗಿನಕಾಯಿ ಒಡೆದು ರಥವನ್ನು ಹೊರ ತೆಗೆಯುವ ಕಾರ್ಯಕ್ಕೆ ಚಾಲನೆ ನೀಡಿದರು.

ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್, ಕಾರ್ಯನಿರ್ವಹಣಾಽಕಾರಿ ಕೆ. ವಿ. ಶ್ರೀನಿವಾಸ್, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೃಷ್ಣವೇಣಿ, ವಿನಯ ಸುವರ್ಣ, ದಿನೇಶ್ ಪಿ.ವಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ಈಶ್ವರ ಬೇಡೆಕರ್, ದೇವತಾ ಸಮಿತಿ ಅಧ್ಯಕ್ಷ ಅಭಿಜಿತ್ ಶೆಟ್ಟಿ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಸಹಿತ ಹಲವರು ಉಪಸ್ಥಿತರಿದ್ದರು.

ಜಾತ್ರೆಯನ್ನು ಯಾವುದೇ ಸಮಸ್ಯೆಗಳಿಲ್ಲದೆ ವಿಜೃಂಭಣೆಯಿಂದ ನಡೆಸಲು ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಭಕ್ತರು ಕಳೆದ ಬಾರಿ ೭೫ ಬ್ರಹ್ಮ ರಥೋತ್ಸವ ಸೇವೆಯನ್ನು ಮಾಡಿಸಿದ್ದು, ಈ ಬಾರಿ ೧೫೦ ಭಕ್ತರಿಂದ ಬ್ರಹ್ಮರಥೋತ್ಸವ ಸೇವೆ ಮಾಡಿಸಬೇಕೆಂಬ ಗುರಿಯನ್ನು ಇಟ್ಟುಕೊಳ್ಳಲಾಗಿದೆ.

| ಪಂಜಿಗುಡ್ಡೆ ಈಶ್ವರ ಭಟ್

ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ