ಜಿಲ್ಲೆ

ಹೆಬ್ಬಾಲೆಯಲ್ಲಿ ದೇವಾಲಯದ 8ನೇ ವಾರ್ಷಿಕೋತ್ಸವ

ಸುನಿಲ್ ಪೊನ್ನೇಟಿ

ಕುಶಾಲನಗರ:

ಕುಶಾಲನಗರ ತಾಲೂಕು ಹೆಬ್ಬಾಲೆ, ನಡುಬೀದಿ ಹಾಗೂ ಹಳಗೋಟೆ ಗ್ರಾಮದ ವೀರಮಡಿವಾಳರ ಸಂಘ ಮತ್ತು ದೇವಾಲಯ ಸಮಿತಿ ವತಿಯಿಂದ ಏರ್ಪಡಿಸಿದ್ದ ಗ್ರಾಮದ ಶ್ರೀ ಲಕ್ಷ್ಮೀದೇವಿ, ಶ್ರೀ ಗಣಪತಿ, ಶ್ರೀ ಭೈರವೇಶ್ವರ ದೇವಾಲಯದ 8ನೇ ವಾರ್ಷಿಕೋತ್ಸವ ಶುಕ್ರವಾರ ವಿಜೃಂಭಣೆಯೊAದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು.

ದೇವಾಲಯದ ಅರ್ಚಕ ಚಂದ್ರ ಶೆಟ್ಟಿ ನೇತೃತ್ವದಲ್ಲಿ ಗಣಪತಿ ಹೋಮದೊಂದಿಗೆ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಮುಂಜಾನೆಯಿAದಲೇ ಕುಂಭಾಭಿಷೇಕ ಸೇರಿದಂತೆ ಕಳಶ ಪೂಜೆ, ಹೂವಿನ ಪೂಜೆ, ಕುಂಕುಮಾರ್ಚನೆ ನಡೆಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಮುಂಜಾನೆ ಕಾವೇರಿ ನದಿಗೆ ತೆರಳಿ ಗಂಗೆ ಪೂಜೆಯೊಂದಿಗೆ ಮಹಿಳೆಯರು ಪೂರ್ಣಕುಂಭ ಕಳಶ ಹೊತ್ತು ಮಂಗಳವಾದ್ಯದೊAದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿದರು. ನಂತರ ದೇವಾಲಯಕ್ಕೆ ಬಂದು ಕಳಶ ಪ್ರತಿಷ್ಠಾನ ಮಾಡಲಾಯಿತು. ಬಳಿಕ ಶ್ರೀ ಮಹಾಲಕ್ಷ್ಮಿ, ಶ್ರೀ ಭೈರವೇಶ್ವರ, ಗಣಪತಿ ದೇವರಿಗೆ ಕಲಾಹೋಮ ಹಾಗೂ ಶುಭ ಕರ್ಕಾಟಕ ಲಗ್ನದಲ್ಲಿ ಗೋಪುರ ಕಳಶ ಪ್ರತಿಷ್ಠಾಪನೆ ಮಾಡಲಾಯಿತು.

ಹೆಬ್ಬಾಲೆ ಗ್ರಾಮಸ್ಥರು ಸೇರಿದಂತೆ ಹಳಗೋಟೆ, ಮರೂರು, ಆರನೇ ಹೊಸಕೋಟೆ ಸುತ್ತಮುತ್ತಲಿನ ನೂರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪುನೀತರಾದರು. ಈ ಸಂದರ್ಭ ಮಾತನಾಡಿದ ದೇವಾಲಯ ಸಮಿತಿ ಅಧ್ಯಕ್ಷ ಮಲ್ಲೇಶ, ಗ್ರಾಮದ ವೀರಮಡಿವಾಳ ಸಂಘ ಹಾಗೂ ದೇವಾಲಯ ಸಮಿತಿ ವತಿಯಿಂದ ಲಕ್ಷಿö್ಮÃ, ಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಗ್ರಾಮಸ್ಥರು ಹಾಗೂ ದಾನಿಗಳು ವಾರ್ಷಿಕೋತ್ಸವಕ್ಕೆ ಸಹಕಾರ ನೀಡಿದ್ದಾರೆ. ದೇವಿಯು ಉತ್ತಮ ಮಳೆ ಬೆಳೆಯೊಂದಿಗೆ ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದೇವೆ ಎಂದರು.

ಕಾರ್ಯದರ್ಶಿ ಮಂಜು ಮಾತನಾಡಿ, ಕಳೆದ ಎರಡು ದಿನಗಳಿಂದ ದೇವಿಯನ್ನು ವಿಶಿಷ್ಟ ಹಾಗೂ ವೈರಿಷ್ಟಪೂರ್ಣವಾಗಿ ಆರಾಧಿಸಲಾಗಿದೆ. ನಮ್ಮ ಸಮುದಾಯದ ಬಾಂಧವರು ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಅಗತ್ಯ ಸಹಕಾರ ನೀಡಿದ್ದಾರೆ ಎಂದರು.

ಮಹಾಪೂಜೆಯ ನಂತರ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು. ದೇವಾಲಯಕ್ಕೆ ಆಗಮಿಸಿದ್ದ ನೂರಾರು ಭಕ್ತರಿಗೆ ದೇವಾಲಯ ಸಮಿತಿ ವತಿಯಿಂದ ಅನ್ನಸಂತರ್ಪಣೆ ವ್ಯವಸ್ಥೆ ಏರ್ಪಡಿಸಲಾಗಿತ್ತು. ಈ ಸಂದರ್ಭ ದೇವಾಲಯ ಸಮಿತಿ ಉಪಾಧ್ಯಕ್ಷ ಮಂಜು ಶೆಟ್ಟಿ, ಖಜಾಂಚಿ ಹೆಚ್.ವಿ. ಸೋಮಣ್ಣ,ಸದಸ್ಯರಾದ ಯೋಗೇಶ್, ಮಹೇಶ್, ವೀರಪ್ಪ, ಬಸವಣ್ಣ, ಶಿವಕುಮಾರ್, ಮಹದೇವ, ಪ್ರಕಾಶ, ಪುಟ್ಟಣ್ಣ, ಚಂದ್ರ, ವೀರಾಜಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

ಶಾಸಕ ಡಾ. ಮಂತರ್ ಗೌಡ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಾಲಯದ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸಿಕೊಡುವುದಾಗಿ ಇದೇ ವೇಳೆ ಭರವಸೆ ನೀಡಿದರು. ಇದೇ ಸಂದರ್ಭ ದೇವಾಲಯ ಸಮಿತಿ ವತಿಯಿಂದ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.