ಜಿಲ್ಲೆ

ದೇವಸ್ಥಾನ ವಾರ್ಷಿಕೋತ್ಸವ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ತಾಲೂಕಿನ ನವಲೂರ ಗ್ರಾಮದ ಅಭಿಷ್ಟಾದಾಯಕ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ ಮಹಾರಥೋತ್ಸವ ನಿಮಿತ್ತ ಫೆ. 11, 12ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಫೆ. 11ರಂದು ಪ್ರಾತಃಕಾಲದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ ಮಹಾಗಣಪತಿ ಪೂಜೆ, ನವಗ್ರಹ ಪೂಜೆ, ಮಂಡಲ ಆರಾಧನೆ ಹಾಗೂ ಗಣಹೋಮ, ಸುದರ್ಶನ ಹೋಮ, ರುದ್ರ ಹೋಮ, ಪೂರ್ಣಾಹುತಿ ನಡೆಯಲಿದೆ.

ಫೆ. 12ರಂದು ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಸಿದ್ಧಿವಿನಾಯಕ ಸ್ವಾಮಿಗೆ ಮಹಾರುದ್ರಾಭಿಷೇಕ, ಅಲಂಕಾರ, ನಾಮಾವಳಿ ಹಾಗೂ ಮಹಾಮಂಗಳಾರತಿ ನೆರವೇರಲಿದೆ. 12 ಗಂಟೆಗೆ ಅನ್ನ ಸಂತರ್ಪಣೆ, ಸಂಜೆ 5.05ಕ್ಕೆ ಸಕಲ ವಾದ್ಯ ಮೇಳಗಳೊಂದಿಗೆ ಮಹಾರಥೋತ್ಸವ ನೆರವೇರಲಿದೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.