ರಾಣೆಬೆನ್ನೂರ: ದೇವಸ್ಥಾನದ ಬೀಗ ಮುರಿದು ದೇವಿಯ ಮೈ ಮೇಲಿದ್ದ 8.20 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ಹಾಗೂ ತೇಜೂರಿಯಲ್ಲಿದ್ದ ಚಿನ್ನದ ಆಭರಣಗಳನ್ನು ದೋಚಿಕೊಂಡು ಪರಾರಿಯಾದ ಟನೆ ಇಲ್ಲಿಯ ಮಾರುತಿ ನಗರದ ತುಂಗಾಜಲ ಚೌಡೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ದೇವಸ್ಥಾನದ ಆವರಣದಲ್ಲಿರುವ ತೇಜೂರಿಯಲ್ಲಿ ದೇವಿಯ ಚಿನ್ನಾಭರಣ ಇಡಲಾಗಿತ್ತು. ಇದನ್ನು ಗಮನಿಸಿದ ಖದೀಮರು ರಾತ್ರಿ ಸಮಯದಲ್ಲಿ ದೇವಸ್ಥಾನದ ಬಾಗಿಲ ಬೀಗ ಮುರಿದು ಒಳಗೆ ನುಗ್ಗಿ ಚಿನ್ನಾಭರಣ ದೋಚಿದ್ದಾರೆ ಎನ್ನಲಾಗಿದೆ. ಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.