ಜಿಲ್ಲೆ

ವಿಮಾನ ನಿಲ್ದಾಣದ ನೈಟ್ ಲ್ಯಾಂಡಿಂಗ್‌ ಕಾಮಗಾರಿಗೆ ಶೀಘ್ರ ಟೆಂಡರ್ ಕರೆಯಲಿ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದ ನೈಟ್ ಲ್ಯಾಂಡಿಂಗ್‌ಗೆ ಸಂಬಂಧಿಸಿ ರಾಜ್ಯ ಸರ್ಕಾರ 6.5 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇದು ಹೇಳಿಕೆಗಷ್ಟೇ ಸೀಮಿತವಾಗಬಾರದು. ತಕ್ಷಣವೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ ಅವರು ಕೂಡ ಅದಕ್ಕೆ ಸಹಕಾರ ನೀಡಬೇಕು. ಶಿವಮೊಗ್ಗದಿಂದ ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ವಿಮಾನ ಸಂಚಾರ ಶುರುವಾಗಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು. ಪ್ರಸ್ತುತ ರಾಜ್ಯ ಸರ್ಕಾರ ಅಭಿವೃದ್ಧಿಯನ್ನು ಮರೆತಿದೆ. ಇದೀಗ ಪ್ರತಿಪಕ್ಷ ಶಾಸಕರಿಗೆ 25 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ಸರ್ಕಾರ ಹೇಳಿದೆ. ಶೀಘ್ರವೇ ರಸ್ತೆ ಗುಂಡಿಗಳಿಗೆ ಮುಕ್ತಿ ಸಿಗಲಿ ಎಂದರು.