ಕುಡಚಿ: ಹಾರೂಗೇರಿಯ ಎಸ್‌ಪಿಎಂ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಆಶ್ರಯದಲ್ಲಿ ಈಚೆಗೆ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕವಲಯ ಫ್ರೀ ಸ್ಟೈಲ್ ಕುಸ್ತಿ ಪಂದ್ಯಾವಳಿಯಲ್ಲಿ ಪಟ್ಟಣದ ಬಾಬಾಸಾಹೇಬ ಅಂಬೇಡ್ಕರ್ ಶಿಕ್ಷಣ ಸಂಸ್ಥೆಯ ಬಿ.ಶಂಕರಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಕ್ರೀಡಾಪಟುಗಳು 10ನೇ ಬಾರಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.
ವಿದ್ಯಾರ್ಥಿ ಮಹೇಶ ಲಂಗೋಟಿ 70 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ, ಬಾಪುಸಾಹೇಬ ಶಿಂಧೆ 92 ಕೆಜಿ ವಿಭಾಗದಲ್ಲಿ, ಮಹಾಂತೇಶ ಮೇತ್ರಿ 61 ಕೆಜಿ ಫ್ರೀ ಸ್ಟೈಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಸಿದ್ದಾಂತ ಕಾಮಕರ 60 ಕೆಜಿ ಗ್ರೀಕೋ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬ್ಲೂಗಳಾಗಿ ಆಯ್ಕೆಯಾಗಿದ್ದಾರೆ.
2025 ಜನವರಿಯಲ್ಲಿ ಪಂಜಾನಲ್ಲಿ ನಡೆಯುವ ರಾಷ್ಟ್ರಮಟ್ಟದ ಅಂತರ್ ವಿವಿ ಕುಸ್ತಿ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಸತ್ಕರಿಸಿ ಗೌರವಿಸಲಾಯಿತು. ಪ್ರಾಚಾರ್ಯ ಎ.ಎಸ್.ಕಾಂಬಳೆ, ದೈಹಿಕ ಶಿಕ್ಷಣ ನಿರ್ದೆಶಕ ಆರ್.ಎಂ.ಮಹೇಶವಾಡಿಗಿ, ಬಾಬಾಲಾಲ ಪಿನ್ನಿತೋಡ ಇದ್ದರು.