ಹೊಸಪೇಟೆ ತಹಸಿಲ್ ಕಚೇರಿ ಎದುರು ಮುಸ್ಲಿಮರು ಪ್ರತಿಭಟನೆ ನಡೆಸಿದರು. ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ಡಾ.ಮೈನುದ್ದೀನ್ ದುರ್ವೇಶ್, ಬಡಾವಲಿ, ಫಿರೋಜ್ ಖಾನ್, ಸದ್ದಾಮ್ ಹುಸೇನ್, ಗಚ್ಛ ಖಾದರ್, ಖಾಜಾ ಮಹಮ್ಮದ್ ನಿಯಾಜ್, ಪ್ರಮುಖರಾದ ರಾಮಚಂದ್ರಪ್ಪ, ಭಾಸ್ಕರ್ ರೆಡ್ಡಿ, ಜಂಬಯ್ಯ ನಾಯಕ, ಕರುಣಾನಿಧಿ ಇತರರಿದ್ದರು. 
ಜಿಲ್ಲೆ

ಕಾಯ್ದೆ ಹಿಂಪಡೆಯದಿದ್ದರೆ ಉಗ್ರಹೋರಾಟ

ಹೊಸಪೇಟೆ: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಅಂಜುಮನ್ ಜಿದ್ಮತೆ ಇಸ್ಲಾಂ ಕಮಿಟಿ ನೇತೃತ್ವದಲ್ಲಿ ಮುಸ್ಲಿಮರು ನಗರದ ತಹಸಿಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪಟ್ಟಣದ ಈದ್ಗಾ ಮೈದಾನದಿಂದ ಮೆರವಣಿಗೆ ಆರಂಭಿಸಿ ತಹಸಿಲ್ ಕಚೇರಿ ಎದುರು ಸಂಚಆರ ತಡೆ ನಡೆಸಿ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ವಿರುದ್ಧ ಘೋಷಣೆ ಕೂಗಿದರು. ವಕ್ಫ್ ತಿದ್ದುಪಡಿ ಮಸೂದೆ ಭಾರತ ಸಂವಿಧಾನದ ಮೇಲಿನ ದಾಳಿಯಾಗಿದೆ. ಅಲ್ಪಸಂಖ್ಯಾತರನ್ನು ಅವಮಾನಿಸುವುದು, ಅವರ ಹಕ್ಕುಗಳನ್ನು ಕಸಿದುಕೊಳ್ಳುವುದು ಕೇಂದ್ರ ಸರ್ಕಾರದ ಹುನ್ನಾರವಾಗಿದೆ. ಭಾರತೀಯ ಸಮಾಜವನ್ನು ವಿಭಜಿಸುವ ಗುರಿ ಹೊಂದಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಗೆ ರಾಷಟ್ರೆಪತಿಗಳು ಅಂಕಿತ ಹಾಕದೆ ರದ್ದುಗೊಳಿಸುವಂತೆ ಒತ್ತಾಯಿಸಿದರು.

ಬಿಜೆಪಿಯವರು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಎಂದು ಹೇಳುತ್ತಾರೆ. ಆದರೆ, ಒಂದು ಸಮುದಾಯವನ್ನು ಗುರಿಯಾಗಿಸಿ ತಾರತಮ್ಯ ಮಾಡಲಾಗುತ್ತಿದೆ. ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿರುವ ಕಾಯ್ದೆಯನ್ನು ಬಲವಾಗಿ ಖಂಡಿಸುತ್ತೇವೆ. ಈ ಕಾಯ್ದೆ ಕರ್ನಾಟಕದಲ್ಲಿ ಜಾರಿಯಾಗದಂತೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.