ಸಾಂದರ್ಭಿಕ ಚಿತ್ರ 
ಜಿಲ್ಲೆ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರೀಶ ಎಂ.
ಮಂಗಳೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಡ್ಯಾರ್ ಕಣ್ಣೂರು ಕುಂಡಾಲ ಮನೆಯ ಸೋಹಿಫ್ (25) ಬಂಧಿತ ಆರೋಪಿ.
ಕಂಕನಾಡಿ ನಗರ ಠಾಣೆಯಲ್ಲಿ ರೌಡಿ ಆಸಾಮಿಯಾಗಿದ್ದು, ಈತನ ವಿರುದ್ಧ ಕಂಕನಾಡಿ, ಪಣಂಬೂರು, ಕದ್ರಿ ಠಾಣೆಗಳಲ್ಲಿ ಕಳ್ಳತನ, ಹಲ್ಲೆ, ಕೊಲೆಯತ್ನದಂತಹ ನಾಲ್ಕು ಪ್ರಕರಣಗಳು ದಾಖಲಾಗಿವೆ.
ಕಂಕನಾಡಿ ನಗರ ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಈತನ ವಿರುದ್ಧ ನ್ಯಾಯಾಲಯ ದಸ್ತಗಿರಿ ವಾರಂಟ್ ಹೊರಡಿಸಿತ್ತು. ಆದರೆ ಮನೆ ಬದಲಾಯಿಸಿಕೊಂಡಿದ್ದ ಆರೋಪಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಠಾಣಾ ಸಿಬಂದಿಯವರು ಕುದ್ರೋಳಿಯ ಆತನ ಮನೆಯಿಂದ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.