ಕುಂದಾಪುರ: ಮನೆ ಸಮೀಪದ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ಮಾರಕಾಯುಧದೊಂದಿಗೆ ಬಂದ ದುಷ್ಕರ್ಮಿಗಳ ತಂಡವೊಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಗಂಗೊಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆಲೂರು ಹೊಯ್ಯಣದ ಸಚಿನ್(24), ರಾಮೇಶ್ವರ ನಗರದ ಶರತ್ ದೇವಾಡಿಗ(24), ಕೆಂಬೈಲಿನ ಕಾರ್ತಿಕ್(22), ಕೀರ್ತಿಕ್(20), ಪಡುಕೋಣೆಯ ಪ್ರಕಾಶ್(20), ಹನುಮಂತನಗರ ನಿವಾಸಿ ಜಗದೀಶ್(31), ರಾಮಮಂದಿರ ನಿವಾಸಿ ಗೌತಮ್(23), ಮಹೇಂದ್ರ ಪೂಜಾರಿ, ಹಡವು ನಿವಾಸಿ ಸಂತೋಷ್ ಮೊಗವೀರ, ರೋಶನ್ ಫರ್ನಾಂಡೀಸ್, ಆಲೂರು ನಿವಾಸಿ ಪ್ರಸಾದ್ ಆಚಾರ್ಯ(30) ಬಂಧಿತ ಆರೋಪಿಗಳು. ಆರೋಪಿಗಳಲ್ಲಿ ಇಬ್ಬರು ಸಂಘರ್ಷಕ್ಕೊಳಗಾದ ಬಾಲಕರು ಸೇರಿ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 1 ಏರ್ ಪಿಸ್ತೂಲ್, 4 ಬೈಕ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಆರೋಪಿಗಳು ಸುದೇಶ್ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಅವರ ತಲೆಗೆ ಪಿಸ್ತೂಲ್ ಹಿಡಿದು ಜೀವ ಬೆದರಿಕೆ ಹಾಕಿದ್ದಾನೆ. ಗಂಗೊಳ್ಳಿ ಪೊಲೀಸ್ ಠಾಣಾ ಉಪನಿರೀಕ್ಷಕ ಹರೀಶ್ ಆರ್.ನಾಯ್ಕ, ಅಪರಾಧ ವಿಭಾಗದ ಪಿಎಸ್‌ಐ ಬಸವರಾಜ್ ಕನಶೆಟ್ಟಿ, ಸಿಬ್ಬಂದಿ ನಾಗರಾಜ, ಕೇಶವ, ಸಂದೀಪ, ರಾಘವೇಂದ್ರ, ರಾಷ್ಟ್ರಪತಿ, ಚಾಲಕ ಸುಧೀರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.