ಜಿಲ್ಲೆ

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಹರೀಶ ಎಂ.

ಮಂಗಳೂರು: ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಕಾವೂರು ಜ್ಯೋತಿನಗರ ನಿವಾಸಿ ಧರ್ಮರಾಜ (60) ಬಂಧಿತ ಆರೋಪಿ. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಕಾವೂರು ಠಾಣೆಯ ಎಎಸ್‌ಐ ಚಂದ್ರಹಾಸ ಸನಿಲ್, ಹೆಡ್ ಕಾನ್‌ಸ್ಟೇಬಲ್ ಬಾಲಕೃಷ್ಣ ಮತ್ತು ಕಾನ್‌ಸ್ಟೇಬಲ್ ಚಂದ್ರಶೇಖರಪ್ಪ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಪಕ್ಷಿಕೆರೆಯ ಕೆಂಬ್ರಾಲ್ ಎಂಬಲ್ಲಿ ಪತ್ತೆ ಮಾಡಿ ಬಂಧಿಸಿ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆತನಿಗೆ ಅ.29ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.