ಜಿಲ್ಲೆ

ತಂಬಾಕು ಮುಕ್ತ ಸಮಾಜ ನಿರ್ಮಾಣದ ಗುರಿ

ವಿಜಯವಾಣಿ ಸುದ್ದಿಜಾಲ ಧಾರವಾಡ
ಬೀಡಿ, ಸಿಗರೇಟು, ಗುಟ್ಕಾದಂತಹ ತಂಬಾಕು ಉತ್ಪನ್ನಗಳ ಬಳಕೆಯಿಂದ ವ್ಯಕ್ತಿ ಬಲಿಯಾಗುತ್ತಿದ್ದಾನೆ. ಸಾಮಾನ್ಯವಾಗಿ ಪಾಲಕರು ತಂಬಾಕು ಉತ್ಪನ್ನ ತರಲು ಮಕ್ಕಳನ್ನು ಅಂಗಡಿಗಳಿಗೆ ಕಳಿಸುತ್ತಾರೆ. ಇದರಿಂದ ಮಕ್ಕಳು ತಂದೆ&ತಾಯಿ ಇಲ್ಲದ ಸಮಯದಲ್ಲಿ ಮನೆಯಲ್ಲಿ ಇಂತಹ ಕೆಟ್ಟ ಚಟಗಳನ್ನು ಮಾಡಲು ಪ್ರಯತ್ನಿಸುತ್ತಾರೆ. ಇದರಿಂದ ಮಕ್ಕಳೂ ಮುಂದಿನ ದಿನಗಳಲ್ಲಿ ತಂಬಾಕು ಸೆವನೆಗಳ ದಾಸರಾಗುತ್ತಾರೆ ಎಂದು ಹಿರಿಯ ಸಿವಿಲ್​ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಕಳವಳ ವ್ಯಕ್ತಪಡಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಣಾ ಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಟಕ, ಕರ್ನಾಟಕ ಕಲಾ ಮತ್ತು ವಾಣಿಜ್ಯ ಕಾಲೇಜು ಸಹಯೋಗದಲ್ಲಿ ಕೆಸಿಡಿ ಕಾಲೇಜು ಬಿಬಿಎ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಂಬಾಕು ಮುಕ್ತ ಸಮಾಜ ನಿಮಿರ್ಸುವ ಉದ್ದೇಶದಿಂದ ವಿಶ್ವ ಆರೋಗ್ಯ ಸಂಸ್ಥೆ ಇಡೀ ವಿಶ್ವದಲ್ಲಿ ಮೇ 31ರಂದು ವಿಶ್ವ ತಂಬಾಕು ದಿನ ಆಚರಿಸುತ್ತದೆ. ಪ್ರತಿ ವರ್ಷ ಒಂದೊಂದು ೂಷವಾಕ್ಯದ ಮೂಲಕ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ. ಇಂದಿನ ದಿನಗಳಲ್ಲಿ ಯುವ ಸಮೂಹವೇ ಹೆಚ್ಚು ತಂಬಾಕು ಸೇವನೆ, ಬೀಡಿ, ಸಿಗರೇಟು, ಗುಟ್ಕಾ ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇದು ಮುಂದಿನ ದಿನಮಾನಗಳಲ್ಲಿ ಹೆಚ್ಚಾಗುವ ಸಂಭವ ಇದೆ ಎಂದರು.
ಕೆಸಿಡಿ ಪ್ರಾಚಾರ್ಯ ಡಾ. ಡಿ.ಬಿ ಕರಡೋಣಿ ಮಾತನಾಡಿದರು. ಮನೋವೈದ್ಯ ಡಾ. ರಾವೇಂದ್ರ ಪಾಟೀಲ ಅವರು ತಂಬಾಕು ಸೇವನೆಯಿಂದ ಉಂಟಾಗುವ ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಟೀಲ ಶಶಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ ಚಿತ್ತರಗಿ, ಡಾ. ಮಂಜುನಾಥ, ಡಾ. ರವೀಂದ್ರ ಬೊವೇರ, ಡಾ.ಎಸ್​.ಬಿ.ಕಳಸೂರಮಠ, ಡಾ. ತನುಜಾ ಕೆ.ಎನ್​., ಕಾಲೇಜು ಸಿಬ್ಬಂದಿ, ವಿದ್ಯಾಥಿರ್ಗಳು, ಇತರರು ಇದ್ದರು.