ಜಿಲ್ಲೆ

ಸನ್ಮಾನ ಸಮಾರಂಭ ಇಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ಜು. 10ರಂದು ಸಂಜೆ 6 ಗಂಟೆಗೆ ರಾ.ಹ. ದೇಶಪಾಂಡೆ ಭವನದಲ್ಲಿ 2023-24ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾಷಿರ್ಕ ಪರೀಕ್ಷೆಯಲ್ಲಿ ಶಾಲಾ ಫಲಿತಾಂಶ ಹೆಚ್ಚಿಸಿದ ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಗೌರವ ಸನ್ಮಾನ ಸಮಾರಂಭ ಆಯೋಜಿಸಿದೆ.
ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಡಿಮ್ಹಾನ್ಸ್​ ಮನೋವೈದ್ಯಕಿಯ ಸಮಾಜ ಕಾರ್ಯಕರ್ತ ಪ್ರಶಾಂತ ಪಾಟೀಲ ಅತಿಥಿಗಳಾಗಿ ಆಗಮಿಸುವರು. ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು.
ಚಿಲಕವಾಡ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಡಾ. ಪ್ರಭಾಕರ ಲಗಮಣ್ಣವರ, ತಡಕೋಡ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಭುವನೇಶ್ವರಿ ಕತ್ತಿ, ಕರ್ನಾಟಕ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಎನ್​.ಎನ್​. ಸವಣೂರ, ಯರೇಬೂದಿಹಾಳ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ವಸಂತ ಅರಮನಿ ಹಾಗೂ ಬೈರಿದೇವರಕೊಪ್ಪದ ಶ್ರೀ ಶಿವಾನಂದ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಪಿಎನ್​. ಬಾಳಪ್ಪಗೌಡರ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.