ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ನಿವಾಸದಲ್ಲಿ ಸಂಸದ ಡಾ. ಕೆ.ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್, ನಗರಸಭೆ ಮಾಜಿ ಅಧ್ಯಕ್ಷರಾದ ಎಂ.ಮುನಿಕೃಷ್ಣ, ಲೀಲಾವತಿ ಶ್ರೀನಿವಾಸ್ ಮತ್ತಿತರರು ಇದ್ದರು. 
ಜಿಲ್ಲೆ

ಜನೌಷಧ ಕೇಂದ್ರಕ್ಕೆ ನಿರ್ಬಂಧ ಸರಿಯಲ್ಲ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ನಿವಾಸದಲ್ಲಿ ಸಂಸದ ಡಾ. ಕೆ.ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್, ನಗರಸಭೆ ಮಾಜಿ ಅಧ್ಯಕ್ಷರಾದ ಎಂ.ಮುನಿಕೃಷ್ಣ, ಲೀಲಾವತಿ ಶ್ರೀನಿವಾಸ್ ಮತ್ತಿತರರು ಇದ್ದರು.

ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಸಂಸದ ಡಾ. ಕೆ. ಸುಧಾಕರ್ ಕಿಡಿ - ಜನವಿರೋಧಿ ನಿಲುವು ಎಂದು ಅಸಮಾಧಾನ

ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಧಾನ ಮಂತ್ರಿ ಜನೌಷಧ ಕೇಂದ್ರಕ್ಕೆ ನಿರ್ಬಂಧ ಹೇರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಸಂಸದ ಡಾ. ಕೆ.ಸುಧಾಕರ್ ಕಿಡಿಕಾರಿದ್ದಾರೆ.
ತಾಲೂಕಿನ ಪೆರೇಸಂದ್ರ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳಿಗೆ ನಿರ್ಬಂಧ ಹೇರುವ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದ್ದಾರೆ. ಇದು ಜನ ವಿರೋಧಿ ನಿಲುವು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಆರೋಗ್ಯ ಸಚಿವನಾಗಿದ್ದಾಗ ರಾಜ್ಯದಲ್ಲಿ 1 ಸಾವಿರಕ್ಕೂ ಹೆಚ್ಚು ಜನೌಷಧ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಂಡಿದ್ದು, ಬಿಪಿ, ಶುಗರ್ ಸೇರಿ ನಾನಾ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರಿಗೆ ರಿಯಾಯಿತಿ ದರದ ಔಷಧಗಳಿಂದ ಹಣ ಉಳಿತಾಯವಾಗುತ್ತಿದೆ. ಇಂಥ ಮಳಿಗೆಗಳನ್ನು ಮುಚ್ಚುವುದು ಸರಿಯಲ್ಲ. ಈ ನಿರ್ಣಯವನ್ನು ಕೂಡಲೇ ಹಿಂಪಡೆಯಬೇಕು. ಆಸ್ಪತ್ರೆಗಳಲ್ಲಿ ಇನ್ನೂ ಎರಡು ಜನೌಷಧ ಕೇಂದ್ರಗಳಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್, ನಗರಸಭೆ ಮಾಜಿ ಅಧ್ಯಕ್ಷರಾದ ಎಂ.ಮುನಿಕೃಷ್ಣ, ಲೀಲಾವತಿ ಶ್ರೀನಿವಾಸ್ ಮತ್ತಿತರರು ಇದ್ದರು.

ನೀರಿನ ಸಮಸ್ಯೆ ಬಗ್ಗೆ ಚರ್ಚೆ
ಬಯಲುಸೀಮೆ ಜಿಲ್ಲೆಗಳಲ್ಲಿನ ನೀರಿನ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುವಾರ್ ಗಮನಹರಿಸಬೇಕು ಎಂದು ಸಂಸದ ಡಾ. ಕೆ. ಸುಧಾಕರ್ ಒತ್ತಾಯಿಸಿದರು. ಬಯಲುಸೀಮೆಗೆ ಕಾವೇರಿ ನೀರು ಸಿಗುವುದಿಲ್ಲ. ಹಾಗೂ ಇತರ ನೀರಾವರಿ ಯೋಜನೆಗಳಲ್ಲೂ ಈ ಪ್ರದೇಶದ ಜನರಿಗೆ ನೀರು ಸಿಕ್ಕಿಲ್ಲ. ಇಲ್ಲಿನ ಜನರು ಸಹ ಇದೇ ರಾಜ್ಯದಲ್ಲಿದ್ದು ಕೃಷ್ಣಾ ನದಿಯಿಂದ 510 ಟಿಎಂಸಿ ನೀರು ಪಡೆದು, ಉಳಿದಂತೆ ನಿರ್ದಿಷ್ಟ ಪ್ರಮಾಣದ ನೀರನ್ನು ನಾರಾಯಣಪುರ ಜಲಾಶಯದಿಂದ ಆಂಧ್ರಕ್ಕೆ ಹರಿಸಿದರೆ ಅನುಕೂಲವಾಗಲಿದೆ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕಿದೆ. ಬೇರೆ ನೀರಾವರಿ ಯೋಜನೆಗಳ ಶೇ.10ರಷ್ಟನ್ನು ಇಲ್ಲಿಗೆ ಖರ್ಚು ವಾಡಿದರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾವಾಂತರ ಹಾಗೂ ಕೋಲಾರಕ್ಕೆ ಸಮೃದ್ಧವಾಗಿ ನೀರು ಸಿಗಲಿದೆ ಎಂದರು.
ಈಗಾಗಲೇ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಹೂವು ಬೆಳೆಗಾರರಿಗೆ ನಷ್ಟವಾಗಿದ್ದು, ಇದರ ಬಗ್ಗೆ ರಾಜ್ಯ ಸರ್ಕಾರ ಗಮನಹರಿಸಿಲ್ಲ. ಕೇಂದ್ರ ಸರ್ಕಾರ 14 ಸಾವಿರ ರೂ. ವಿಮೆ ಯೋಜನೆ ತಂದಿದ್ದು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.


ಭೂ ಸ್ವಾಧೀನದಲ್ಲಿ ಲೂಟಿ
ಹಿಂದೆ ಮಂಚೇನಹಳ್ಳಿಯಲ್ಲಿ 2 ಸಾವಿರ ಎಕರೆ ಭೂಮಿಯನ್ನು ಕೈಗಾರಿಕಾಭಿವೃದ್ಧಿಗೆ ಗುರುತಿಸಿದ್ದು ಇಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುತ್ತಿಲ್ಲ. ಬದಲಿಗೆ ಫಲವತ್ತಾದ ಭೂಮಿಯ ಸ್ವಾಧೀನದ ಮೂಲಕ ರೈತರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡಲಾಗುತ್ತಿದೆ. ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ಸತ್ಯಹರಿಶ್ಚಂದ್ರನಂತೆ ವರ್ತಿಸುತ್ತಿದ್ದು, ಭೂ ಸ್ವಾಧೀನ ಎಂದರೆ ಹಣ ವಾಡುವ ಹೊಸ ವಿಧಾನವಾಗಿದೆ ಎಂದು ಡಾ. ಕೆ. ಸುಧಾಕರ್ ದೂರಿದರು. ಜಿಲ್ಲೆಯಲ್ಲಿನ ಗೋವಾಳ ಜಮೀನನ್ನು ಹಿಂಬಾಲಕರಿಗೆ ನೀಡಲಾಗುತ್ತಿದೆ. ನಂದಿ ಗ್ರಾಮದ ಭಾಗದಲ್ಲಿ ನಕಲಿ ದಾಖಲೆ ಸಷ್ಟಿಸಿ ಭೂಮಿ ಕಬಳಿಸಲಾಗುತ್ತಿದೆ ಎಂದ ಆರೋಪಿಸಿದ ಸಂಸದರು, ಜನಪ್ರತಿನಿಧಿಗಳ ವಾತು ಕೇಳಿ, ನಿಯಮ ಉಲ್ಲಂಘನೆಯ ಮೂಲಕ ಲೂಟಿಗೆ ಸಹಕರಿಸುವ ಅಧಿಕಾರಿಗಳು ಕಂಬಿ ಎಣಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


ಜನರಿಗೆ ಸರ್ಕಾರದ ವಂಚನೆ
ರಾಜ್ಯ ಕಾಂಗ್ರೆಸ್ ಸರ್ಕಾರವು ಸ್ಥಳೀಯ ಆಡಳಿತ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವುದು ಸಂವಿಧಾನಕ್ಕೆ ವಾಡುವ ಅಪಚಾರ ಎಂದು ಸಂಸದರು ಕಿಡಿಕಾರಿದರು. ಸರ್ಕಾರಕ್ಕೆ ಯಾವುದೇ ಚುನಾವಣೆ ಬೇಕಿಲ್ಲ. ಲೋಕಸಭೆ ಚುನಾವಣಾ ಫಲಿತಾಂಶದಿಂದ ಭಯಗೊಂಡು ಪಂಚಾಯಿತಿ ಚುನಾವಣೆ ಮುಂದೂಡಿದ್ದು ವಿಳಂಬಕ್ಕಾಗಿ ಬಿಬಿಎಂಪಿ ವಿಭಜನೆ ನಾಟಕವಾಡಲಾಗುತ್ತಿದೆ. ಚಿಕ್ಕಬಳ್ಳಾಪುರ ನಗರಸಭಾಧ್ಯಕ್ಷ ಸ್ಥಾನಕ್ಕೆ ಸಾವಾನ್ಯ ವರ್ಗ ಮೀಸಲು ನಿಗದಿಪಡಿಸಿದ್ದು ಕಳೆದ 30 ವರ್ಷದಿಂದ ಪರಿಶಿಷ್ಟ ಜಾತಿ ಮಹಿಳೆಗೆ ಅವಕಾಶ ಸಿಕ್ಕಿಲ್ಲ. ಇದು ಕಾಂಗ್ರೆಸ್ ನಾಯಕರ ಸಾವಾಜಿಕ ನ್ಯಾಯ ಎಂದು ವ್ಯಂಗ್ಯವಾಡಿದರು. ಸ್ಥಳೀಯ ಆಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.