ಅಥಣಿ ಗ್ರಾಮೀಣ: ಕಾರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಂಭೀರ ಗಾಯಗೊಂಡ ಟನೆ ಅಥಣಿ ತಾಲೂಕಿನ ಕೊಕಟನೂರ ಕ್ರಾಸ್ ಬಳಿ ಸಂಕೇಶ್ವರ&ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.
ತಾಲೂಕಿನ ಖೋತನಟ್ಟಿ ಗ್ರಾಮದ ರಾಜು ಖೋತ (45) ಮೃತ. ಅವರ ಪುತ್ರ ರಾಯಲಿಂಗೇಶ್ವರ (12) ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಿಂದ ಬೈಕ್ ಮೇಲೆ ಹೊಲಕ್ಕೆ ತೆರಳುವ ವೇಳೆ ವಿಜಯಪುರ ಕಡೆಯಿಂದ ಅಥಣಿ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ದುರ್ಟನೆ ಸಂಭವಿಸಿದೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.