ಜಿಲ್ಲೆ

ಶಿಂಷಾ ನದಿ ದಡದಲ್ಲಿ ಅಪರಿಚಿತನ ಶವ ಪತ್ತೆ

ಮದ್ದೂರು: ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಕೊಲ್ಲಿ ವೃತ್ತದ ಸಮೀಪದ ಶಿಂಷಾ ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಶವ ಶನಿವಾರ ಬೆಳಗಿನ ಜಾವ ಪತ್ತೆಯಾಗಿದೆ.

ಸುಮಾರು 35 ರಿಂದ 40 ವರ್ಷ ವಯಸ್ಸಿನ ಪುರುಷನ ಶವವಾಗಿದ್ದು, ಶವವು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ನದಿ ದಡದಲ್ಲಿರುವುದನ್ನು ಕಂಡ ಸ್ಥಳೀಯರು ಮದ್ದೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೋಲೀಸರು ಮೃತದೇಹವನ್ನು ಹೊರ ತೆಗೆದಿದ್ದಾರೆ.
ಮೃತ ವ್ಯಕ್ತಿಯ ಮೈಮೇಲೆ ಹಳದಿ ಬಣ್ಣದ ನಿಕ್ಕರ್, ಕಪ್ಪುಬಣ್ಣದ ಶರ್ಟ್ ಧರಿಸಿದ್ದಾನೆ. ಯಾವುದಾದರೂ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಪ್ರಕರಣ ದಾಖಲಾಗಿದ್ದಲ್ಲಿ ಮದ್ದೂರು ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.