ಜಿಲ್ಲೆ

ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಮರಿದೇವ ಹೂಗಾರ

ಹುಬ್ಬಳ್ಳಿ: ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಇಲ್ಲಿಯ ಗಂಗಾಧರ ನಗರದ (ಸೆಟ್ಲ್‌ಮೆಂಟ್) ಬಳಿ ಗುರುವಾರ ಪತ್ತೆಯಾಗಿದೆ.
ರಮೇಶ (45) ಮೃತ ದುರ್ದೈವಿ. ಈತನ ಶವವು ಕೆಇಬಿ ಕಾಂಪೌಂಡ್ ಬಳಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಿಕ್ಕಿದೆ. ಈತನ ಸಾವಿನ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬೆಂಡಿಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್‌ಗೆ ರವಾನಿಸಿದ್ದಾರೆ. ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.