ಜಿಲ್ಲೆ

ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಮರಿದೇವ ಹೂಗಾರ

ಹುಬ್ಬಳ್ಳಿ: ಇಲ್ಲಿಯ ಮಂಟೂರ ರಸ್ತೆಯ ಬರ್ನಾಬಸ್ ಹಾಲ್ ಬಳಿಯ ಪಾಳು ಬಿದ್ದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.

ಮೃತನನ್ನು ಮಹೇಶ ಬಳ್ಳಾರಿ ಎಂದು ಗುರುತಿಸಲಾಗಿದೆ. ಕೌಟುಂಬಿಕ ವಿಚಾರದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.