ಜಿಲ್ಲೆ

ಹೆಜ್ಜೇನು ದಾಳಿಗೊಳಗಾದ ಬಾಲಕ ಮೃತ್ಯು

Dakshina Kannada

ಬಂಟ್ವಾಳ: ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬುವರ ಪುತ್ರ ಮಾಝಿನ್(12) ಎಂಬಾತ ಮೃತಪಟ್ಟಿದ್ದಾನೆ. ಗುರುವಾರ ಸಾಯಂಕಾಲ ಮನೆ ಬಳಿ ಆಟವಾಡುತ್ತಿದ್ದ ಮಾಝೀನ್ ಮೇಲೆ ಹೆಜ್ಜೇನು ದಾಳಿ ನಡೆಸಿತ್ತು. ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.