ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಬಸ್ 
ಜಿಲ್ಲೆ

ಡಿವೈಡರ್ ಮೇಲೇರಿದ ಬಸ್, ಪ್ರಯಾಣಿಕರು ಪಾರು

ಇಂದಿರಾ ಎನ್ ಕೆ

ಪಡುಬಿದ್ರಿ: ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಹೋದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆಯಲ್ಲಿ ಶುಕ್ರವಾರ ನಡೆದಿದೆ.

ಬಸ್‌ನ ಇಂಜಿನ್ ಡಿವೈಡರ್ ನಡುವೆ ಸಿಲುಕಿಕೊಂಡ ಪರಿಣಾಮ ಮುಂದೆ ಸಾಗದೇ ಅಲ್ಲಿಯೇ ನಿಂತು ಹೋಗಿತ್ತು. ಯಾವುದೇ ಸಾವು ನೋವು ಸಂಭವಿಸದೆ, ಬಸ್‌ನಲ್ಲಿದ್ದ ಪ್ರಯಾಣಿಕರೆಲ್ಲರೂ ಪಾರಾಗಿದ್ದಾರೆ. ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.