ವಿಜಯಪುರದ ಕಸಾಪ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದತ್ತಿ ಗೋಷ್ಠಿಯನ್ನು ಅಪ್ಪು ಇಟ್ಟಂಗಿ ಉದ್ಘಾಟಿಸಿದರು. ಮಂಜುಳಾ ಅಂಗಡಿ, ಸದಾಶಿವ ಅಂಗಡಿ, ಹಾಸಿಂಪೀರ ವಾಲಿಕಾರ ಮತ್ತಿತರರಿದ್ದಾರೆ. 
ಜಿಲ್ಲೆ

ಜಿಲ್ಲೆಯಲ್ಲಿ ಕಸಾಪ ಕಾರ್ಯ ಶ್ಲಾನೀಯ

ಗಿರೀಶ ಸಗರ

ವಿಜಯಪುರ: ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್​ ಪಾತ್ರ ಅಮೋ ಎಂದು ವಿಜಯಪುರ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಅಪ್ಪು ಇಟ್ಟಂಗಿ ಹರ್ಷ ಹೇಳಿದರು.

ನಗರದ ಕಸಾಪ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿವಿಧ ದತ್ತಿ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್​ ಅತ್ಯಂತ ಕ್ರಿಯಾಶೀಲವಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಕಸಾಪ ಸಾಹಿತ್ಯಾಸಕ್ತರ ಮನದಣಿಸಲು ಶ್ರಮಿಸುತ್ತಿರುವುದು ನಮಗೆಲ್ಲ ಅಭಿಮಾನದ ಸಂಗತಿ ಎಂದರು.

ಜಿಲ್ಲಾ ಸಾವಿತ್ರಿಬಾಯಿ ಫುಲೆ ಸಂದ ಅಧ್ಯೆ ಅಕ್ಕಮ್ಮ ನಾಯಕ ಮಾತನಾಡಿ, ಜಿಲ್ಲೆಯಲ್ಲಿಂದು ಕನ್ನಡ ಸಾಹಿತ್ಯ ಪರಿಷತ್​ ಸಾಹಿತ್ಯಿಕವಾಗಿ ಹಾಗೂ ಸಾಂಸತಿಕವಾಗಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಅತ್ಯಂತ ಚಿಂತನಾತ್ಮಕ, ಅನುಭವಜನ್ಯ ದತ್ತಿಗೋಷ್ಠಿಗಳನ್ನು ಹಮ್ಮಿಕೊಳ್ಳತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಚಡಚಣದ ಸಾಹಿತಿ ವಿದ್ಯಾ ಕಲ್ಯಾಣಶೆಟ್ಟಿ ಶ್ರೀ ಯಡಿಯೂರು ಸಿದ್ಧಲಿಂಗೇಶ್ವರರ ಕುರಿತು ಉಪನ್ಯಾಸ ನೀಡಿ, 16 ನೇ ಶತಮಾನದಲ್ಲಿ ಕನ್ನಡ ನಾಡು ಕಂಡ ಶ್ರೇಷ್ಠ ಸಂತರಲ್ಲಿ ಯಡಿಯೂರು ಸಿದ್ಧಲಿಂಗೇಶ್ವರರು ಒಬ್ಬರು. ಸಿದ್ಧಲಿಂಗೇಶ್ವರರು ಅನುಭಾವಿ ಶರಣ ಚಿಂತಕರಾಗಿ 770 ಕ್ಕೂ ಅಧಿಕ ವಚನಗಳನ್ನು ರಚಿಸುವ ಮೂಲಕ ಲೋಕ ಸಂಚಾರ ನಡೆಸಿ ಹಲವು ಪವಾಡಗಳನ್ನು ಮಾಡಿದರು ಎಂದು ತಿಳಿಸಿದರು.

ವಿಜಯಪುರ ಡೈಟ್​ ಕಾಲೇಜಿನ ದೈಹಿಕ ನಿರ್ದೇಶಕ ಪಿ.ಎಂ. ಮಠಪತಿ ಬಸವಾದಿ ಶರಣರ ಕುರಿತು ಉಪನ್ಯಾಸ ನೀಡಿ, 12 ನೇ ಶತಮಾನದ ಬಸವಾದಿ ಶಿವಶರಣರ ವಚನಗಳು ವೈಚಾರಿಕ ಮತ್ತು ವೈಜ್ಞಾನಿಕ ನೆಲೆಗಟ್ಟಿನ ಮೇಲೆ ಆದರ್ಶ ಸಮಾಜ ನಿರ್ಮಾಣ ಮಾಡಿಕೊಟ್ಟ ಶ್ರೇಯಸ್ಸು ಬಸವಾದಿ ಶಿವಶರಣರಿಗೆ ಸಲ್ಲುತ್ತದೆ. ಹೀಗಾಗಿ, ಅವರು ಚಿಂತನೆಗಳು ನಮ್ಮೆಲ್ಲರ ಬದುಕಿಗೆ ದಾರಿದೀಪ ಎಂದರು.

ಮುಖ್ಯ ಅತಿಥಿಗಳಾಗಿ ಸಂಗಮೇಶ ಮುರಗೋಡ, ಸದಾಶಿವ ಅಂಗಡಿ ಮತ್ತು ಮಂಜುಳಾ ಅಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮರ್ಚಂಟ್ಸ್​ ಅಸೋಸಿಯೇಷನ್​ ಅಧ್ಯಕ್ಷರಾಗಿ ಪುನರಾಯ್ಕೆಯಾದ ರವೀಂದ್ರ ಬಿಜ್ಜರಗಿ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂದ ಜಂಟಿ ಕಾರ್ಯದರ್ಶಿಗಳಾಗಿ ನೇಮಕವಾದ ಉಸ್ಮಾನ್​ ಭಾಷಾ ಆಲಗೂರ ಅವರನ್ನು ಸನ್ಮಾನಿಸಲಾಯಿತು.

ಸಾಹಿತಿ ಸುನಂದಾ ಕೋರಿ ಪ್ರಾರ್ಥಿಸಿದರು. ಪ್ರೊ. ಸಿದ್ರಾಮಯ್ಯ ಲಕ್ಕುಂಡಿಮಠ ಸ್ವಾಗತಿಸಿದರು. ಡಾ. ಮಾಧವ ಗುಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪರವೀನ ಶೇಖ ನಿರೂಪಿಸಿದರು. ಶೋಭಾ ಬಡಿಗೇರ ವಂದಿಸಿದರು. ಮೆಹತಾಬ ಕಾಗವಾಡ ತತ್ವಗಿತೆ ಹಾಡಿದರು.

ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ಬಾಬುರಾವ ಮಹಾರಾಜ, ಎಸ್​.ಎಂ. ಕಣಬೂರ, ಕಮಲಾ ಮುರಾಳ, ಆಶಾ ಬಿರಾದಾರ, ವಿಜಯಲಕ್ಷಿ$್ಮ ಹಳಕಟ್ಟಿ, ರಾಜೇಸಾಬ ಶಿವನಗುತ್ತಿ, ಅರ್ಜುನ ಶಿರೂರ, ಕೆ.ಎಸ್​. ಹಣಮಾಣಿ, ಲತಾ ಗುಂಡಿ, ಗಂಗಮ್ಮ ರಡ್ಡಿ, ಅಬ್ದುಲರಜಾಕ ಮುಲ್ಲಾ, ಜಿ.ಎಸ್​. ಬಳ್ಳೂರ, ಎಲ್​.ಬಿ. ಶೇಖ, ರೂಪಾ ರಜಪೂತ, ಅಹಮ್ಮದ ವಾಲಿಕಾರ ಮತ್ತಿತರರಿದ್ದರು.