ಸಿರವಾರ ತಾಲೂಕಿನ ನಿಲೋಗಲ್ ಕ್ಯಾಂಪ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವುದು. 
ಜಿಲ್ಲೆ

ಪಲ್ಟಿಯಾದ ಕಾರು, ಚಾಲಕ ಪಾರು

Gangavati - Desk - Veeresh S Ullagaddi

ಸಿರವಾರ: ತಾಲೂಕಿನ ನಿಲೋಗಲ್ ಕ್ಯಾಂಪ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಹೆದ್ದಾರಿ ಪಕ್ಕದಲ್ಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ ನಡೆದಿದೆ.


ಬಾಗಲಕೋಟಿ ಜಿಲ್ಲೆಯಿಂದ ಶ್ರೀಶೈಲದ ಕಡೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಕಂಬ ಮುರಿದಿದ್ದು, ವಿವಿಧ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಪೊಲೀಸರು ಹಾಗೂ ಜೆಸ್ಕಾಂ ಶಾಖಾಧಿಕಾರಿ ಶಿವಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.