ಮದ್ದೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಷಯವಾಗಿದೆ. ಆದರೆ ಪಕ್ಷದಲ್ಲಿನ ಈಗಿನ ಬೆಳವಣಿಗೆಗಳು ಸ್ವಲ್ಪ ಮಟ್ಟಿಗೆ ಬೇಸರ ತಂದಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದರು.
ಮನ್‌ಮುಲ್ ನಿರ್ದೇಶಕರಾಗಿ ಆಯ್ಕೆಯಾದ ಬಿಜೆಪಿ ಮುಖಂಡ ಎಸ್.ಪಿ. ಸ್ವಾಮಿ ಅವರನ್ನು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಅಭಿನಂದಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಕ್ಷದಲ್ಲಿನ ಇತ್ತೀಚಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಏನೂ ಮಾತನಾಡುವುದಿಲ್ಲ, ಮುಂದಿನ ದಿನಗಳಲ್ಲಿ ಎಲ್ಲವೂ ಬಗೆಹರಿಯಲಿದ್ದು, ಪಕ್ಷದ ವರಿಷ್ಠರು ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ, ಹಣ ಬಿಡುಗಡೆಯೂ ಆಗುತ್ತಿಲ್ಲ. ಈ ಎಲ್ಲ ಕಾರಣದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ಗಳತ್ತ ಹೋಗಿ ಸಾಲ ಮಾಡಿಕೊಳ್ಳುತ್ತಿರುವುದರಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಿದರು.
ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮುಖಂಡರಾದ ಇಂಡುವಾಳು ಸಚ್ಚಿದಾನಂದ, ಅಶೋಕ್ ಜಯರಾಮ್, ಚಿಕ್ಕಅಂಕನಹಳ್ಳಿ ಮನು, ಕಿಟ್ಟಿ, ನಿಡಘಟ್ಟ ಮಹೇಶ್ ಇತರರು ಇದ್ದರು.