ಆನೇಕಲ್: ಪಟ್ಟಣದ ಬನ್ನೇರುಘಟ್ಟ ಮುಖ್ಯ ರಸ್ತೆಯ ಶನೇಶ್ಚರ ದೇವಾಲಯದಲ್ಲಿ ಕಡಲೆಕಾಯಿ ಪರಿಷೆಗೆ ತಾಯಿಯೊಂದಿಗೆ ಬಂದಿದ್ದ ಮಗುವಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದೆ. ಮಾದಪಟ್ಟಣದ ಏಕಾಶ್ (2) ಮೃತ. ದೇವಾಲಯದ ಮುಂಭಾಗದಲ್ಲೇ ರಸ್ತೆ ಇದ್ದು, ದೇವರ ದರ್ಶನ ಮುಗಿಸಿಕೊಂಡು ಹೊರ ಬರುತ್ತಿದ್ದಂತೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ.
ಕಣ್ಮುಂದೆಯೇ ಮಗುವಿನ ಪ್ರಾಣಪಕ್ಷಿ ಹಾರಿ ಹೋಗಿದ್ದು, ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.
ಸಾರ್ವಜನಿಕರು ಮಗುವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿತ್ತು.
ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಾಗಿದೆ.