ಮೈಸೂರು: ಮೈಸೂರಿನಲ್ಲಿ ಅಂತಾರಾಷ್ಟೀಯ ಮಟ್ಟದ ಕ್ರಿಕೆಟ್ ಮೈದಾನ ನಿರ್ಮಿಸುವ ಯೋಜನೆ ಮತ್ತೆ ಮುನ್ನೆಲೆಗೆ ಬಂದಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಸಂಭ್ರಮ ಹೆಚ್ಚುವಂತೆ ಮಾಡಿದೆ. ಆದಷ್ಟು ಬೇಗ ನಗರದಲ್ಲಿ ಮೈದಾನ ನಿರ್ಮಾಣವಾಗಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುವ ಭಾಗ್ಯ ದೊರೆಯಲಿ ಎಂದು ಕ್ರಿಕೆಟ್ ಪ್ರೇಮಿಗಳು ಆಶಯ ವ್ಯಕ್ತಪಡಿಸುತ್ತಿದ್ದಾರೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಬೆಂಗಳೂರಿನ ಹೊರಭಾಗಕ್ಕೂ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗಳನ್ನು ಕೊಂಡೊಯ್ಯಬೇಕೆಂದು ನಿರ್ಧರಿಸಿದೆ. ಅದರಂತೆ, ರಾಜ್ಯದ ಎರಡನೇ ಅತಿ ದೊಡ್ಡ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಸಾಂಸ್ಕೃತಿಕ ನಗರಿ’ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನ ನಿರ್ಮಿಸಲು ಕಳೆದ 6 ವರ್ಷಗಳಿಂದ ಪ್ರಯತ್ನಿಸುತ್ತಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮಾಲೀಕತ್ವದ ತಾಲೂಕಿನ ಸಾತಗಳ್ಳಿ ಗ್ರಾಮ ವ್ಯಾಪ್ತಿಯ 19-20 ಎಕರೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಿಸಲು ಉದ್ದೇಶಿಸಲಾಗಿದೆ.
ಈ ಭೂಮಿಯನ್ನು ಕೆಎಸ್‌ಸಿಎಗೆ ನೀಡುವ ಸಂಬಂಧ ಶೀಘ್ರದಲ್ಲೇ ಕ್ಯಾಬಿನೆಟ್ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಕೆಎಸ್‌ಸಿಎ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದ್ದರು. ಮನವಿಯನ್ನು ಆಲಿಸಿದ್ದ ಸಿಎಂ, ಈ ವಿಷಯವನ್ನು ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಬಳಿಕ ಒಪ್ಪಿಗೆ ನೀಡಲಾಗುವುದೆಂದು ಆಶ್ವಾಸನೆ ನೀಡಿದ್ದರು. ಅದರಂತೆ, ಒಂದು ವಾರದಲ್ಲಿ ಕ್ಯಾಬಿನೆಟ್ ಒಪ್ಪಿಗೆ ಸಿಗುವ ಸಾಧ್ಯತೆ ಇದ್ದು, ಎಲ್ಲ ಅಂದುಕೊಂಡಂತೆ ನಡೆದರೆ ಒಂದು ವರ್ಷದಲ್ಲಿ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಸಿದ್ಧವಾಗಲಿದೆ. 2024ನೇ ಸಾಲಿನ ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಗಳನ್ನು ನಗರದಲ್ಲಿಯೇ ಕಣ್ತುಂಬಿಕೊಳ್ಳುವ ಸೌಭಾಗ್ಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಗಲಿದೆ.
ಮೈಸೂರಿನಲ್ಲೂ ಪ್ರತಿಭಾನ್ವಿತ ಕ್ರಿಕೆಟ್ ಪಟುಗಳಿದ್ದಾರೆ. ಆದರೆ ಅಂತಾರಾಷ್ಟ್ರೀಯ ಮಟ್ಟದ ಮೈದಾನ ಇಲ್ಲದ ಕಾರಣ ತಮ್ಮ ಪ್ರತಿಭೆಯನ್ನು ಹೊರ ಜಗತ್ತಿಗೆ ತೋರುವಲ್ಲಿ ಸೋತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಸರ್ಕಾರ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ನೀಡುವುದು ಒಳ್ಳೆಯದು. ಸತತ ಪ್ರಯತ್ನ ಫಲ ಕೊಡುವ ಮೂಲಕ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಗಳ ಜತೆಗೆ, ಐಪಿಎಲ್ ಪಂದ್ಯಗಳು ಜರುಗುವಂತಾಗಲಿ ಎನ್ನುವುದು ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಯಾಗಿದೆ.
ತೊಡಕು ನಿವಾರಣೆಗೆ ಚರ್ಚೆನಗರದ ಸಾತಗಳ್ಳಿ ಬಳಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣ ಮಾಡಲು ಭೂಮಿ ನೀಡುವ ವಿಷಯದಲ್ಲಿ ಇರುವ ತೊಡಕು ನಿವಾರಣೆ ಮತ್ತು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಅವರ ಜತೆ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಮನವಿ ಮಾಡಲಾಗಿದೆ.ಪ್ರತಾಪ್ ಸಿಂಹ ಸಂಸದಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆಕೆಎಸ್‌ಸಿಎ ಈಗಾಗಲೇ ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್(ಗ್ಲೇಡ್ಸ್) ಮೈದಾನ ಹಾಗೂ ಜೆಸಿ ಕಾಲೇಜು ಆವರಣದ ಮೈದಾನಗಳನ್ನು ಅಭಿವೃದ್ಧಿಪಡಿಸಿದೆ. ಸಾತಗಳ್ಳಿ ಬಳಿ 19-20 ಎಕರೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಿಸಲು ಉದ್ದೇಶಿಸಿದೆ. ಈ ಸಂಬಂಧ ಸಂಸದ ಪ್ರತಾಪ್ ಸಿಂಹ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರ ಜತೆ ಮಾತುಕತೆ ನಡೆದಿದೆ. ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ.ಎಸ್.ಸುಧಾಕರ್ ರೈ ಕೆಎಸ್‌ಸಿಎ ಮೈಸೂರು ವಲಯ ಸಂಚಾಲಕಒಪ್ಪಿಗೆ ದೊರೆತ ಕೂಡಲೇ ಭೂಮಿ ಹಸ್ತಾಂತರ ಪ್ರಕ್ರಿಯೆನಾನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿದ್ದ ವೇಳೆ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣ ಸಂಬಂಧ ಕೆಎಸ್‌ಸಿಎಗೆ ಭೂಮಿ ನೀಡಲು ಮುಂದಾಗಿದ್ದೆವು. ಸದ್ಯ ಆ ಪ್ರಕ್ರಿಯೆ ಈಗ ಕ್ಯಾಬಿನೆಟ್‌ನಲ್ಲಿದ್ದು, ಅಲ್ಲಿ ಒಪ್ಪಿಗೆ ದೊರೆತ ಕೂಡಲೇ ಭೂಮಿ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಬಳಿಕ ಕೆಎಸ್‌ಸಿಎ ವತಿಯಿಂದ ಮೈದಾನ ನಿರ್ಮಾಣ ಮಾಡಬಹುದಾಗಿದೆ.ಎಚ್.ವಿ.ರಾಜೀವ್ ಮುಡಾ ಮಾಜಿ ಅಧ್ಯಕ್ಷಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ಅಗತ್ಯಮೈಸೂರಿನಲ್ಲೂ ಪ್ರತಿಭಾನ್ವಿತ ಕ್ರಿಕೆಟ್ ಪಟುಗಳಿದ್ದಾರೆ. ಆದರೆ ಅಂತಾರಾಷ್ಟ್ರೀಯ ಮಟ್ಟದ ಮೈದಾನ ಇಲ್ಲದ ಕಾರಣ ಪ್ರತಿಭೆಯನ್ನು ಹೊರ ಜಗತ್ತಿಗೆ ತೋರುವಲ್ಲಿ ಸೋತಿದ್ದಾರೆ. ಇಂಥ ಸನ್ನಿವೇಶದಲ್ಲಿ ಸರ್ಕಾರ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ನೀಡುವುದು ಒಳ್ಳೆಯದು.ಡಿ.ಎನ್.ಶ್ರೀಕಾಂತ್, ಕ್ರೀಡಾಪಟುನಾನು ಕೆಎಸ್‌ಸಿಎ ಮೈಸೂರು ವಲಯ ಸಂಚಾಲಕನಾಗಿದ್ದ ವೇಳೆ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ತೀರ್ಮಾನಿಸಲಾಗಿತ್ತು. ಅಂದೇ ಸಾತಗಳ್ಳಿ ಬಳಿಯ 19-20 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲು ಮುಂದಾಗಿದ್ದೆವು. ಈಗ ಭೂಮಿ ಹಸ್ತಾಂತರ ಪ್ರಕ್ರಿಯೆ ವೇಗ ಪಡೆದುಕೊಂಡಿರುವುದು ಖುಷಿಯಾಗಿದೆ.ಬಾಲಚಂದರ್ ಮಾಜಿ ಸಂಚಾಲಕ, ಕೆಎಸ್‌ಸಿಎ ಮೈಸೂರು ವಲಯಭೂಮಿ ಹಸ್ತಾಂತರ ಪ್ರಯತ್ನ ಉತ್ತಮ ಬೆಳವಣಿಗೆಮೊದಲು ಸಂಸದ ಪ್ರತಾಪ್‌ಸಿಂಹ ಅವರಿಗೆ ಅಭಿನಂದನೆ ಸಲ್ಲಿಸಬೇಕು. ಏಕೆಂದರೆ, ಮೈಸೂರು ನಗರದ ಸೌಂದರ್ಯಕ್ಕೆ ಧಕ್ಕೆ ತರುತ್ತಿದ್ದ ಡೆಬ್ರಿಸ್ ವಿಲೇವಾರಿ ಮಾಡುವಲ್ಲಿ ಸಂಸದರ ಪಾತ್ರ ದೊಡ್ಡದ್ದಿತ್ತು. ಇದೀಗ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನ ನಿರ್ಮಿಸಲು ಕೆಎಸ್‌ಸಿಎಗೆ ಭೂಮಿ ಹಸ್ತಾಂತರಿಸಲು ದೊಡ್ಡ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿರುವುದು ಖುಷಿಯಾಗಿದೆ.ಕೆ.ವಿವೇಕ್‌ಗೌಡ, ಕ್ರಿಕೆಟ್ ಪ್ರೇಮಿಆದಷ್ಟು ಬೇಗ ನಿರ್ಮಾಣ ಮಾಡಲಿಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನ ನಿರ್ಮಿಸಲು ಮುಂದಾಗಿರುವುದು ಖುಷಿಯ ವಿಚಾರ. ಆದಷ್ಟು ಬೇಗ ಮೈದಾನ ತಲೆ ಎತ್ತುವ ಮೂಲಕ ಐಪಿಎಲ್ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಗಳು ನಡೆಯುವಂತಾಗಲಿ. ಜತೆಗೆ, ನಗರದಲ್ಲಿರುವ ಇತರ ಆಟದ ಮೈದಾನಗಳನ್ನೂ ಅಭಿವೃದ್ಧಿಪಡಿಸಬೇಕು.ರಾಜೇಶ್ವರಿ ಕನಕದಾಸನಗರಕನಸು ನನಸಾಗುವ ಕಾಲ ಬಂದಿದೆಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸಬೇಕೆಂದು ಅನೇಕ ವರ್ಷಗಳಿಂದ ಕನಸು ಕಾಣುತ್ತಿದ್ದೇನೆ. ಸದ್ಯ ನನ್ನ ಕನಸು ನನಸಾಗುವ ಕಾಲ ಬಂದಿದೆ. ಮೈಸೂರಿನಲ್ಲಿ ನಿರ್ಮಾಣವಾಗುವ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನದಲ್ಲಿ ಎಲ್ಲ ಮಾದರಿ ಪಂದ್ಯಗಳು ನಡೆಯವಂತಾಗಲಿದೆ.ಡಾ.ಶಾಂತರಾಜು, ಕ್ರಿಕೆಟ್ ಪ್ರೇಮಿ