ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರು ನಿವಾಸಿಗಳ ನಿದ್ದೆ ಕೆಡಿಸಿದ್ದ ಚಿರತೆ ಸೆರೆಯಾಗಿದೆ ಎನ್ನುವ ಸುದ್ದಿ ಬೆನ್ನಲ್ಲೇ ಚಿರತೆ ಸಾವನ್ನಪ್ಪಿದೆ ಎನ್ನಲಾಗಿದೆ.
ಕಳೆದ ಎರಡು ದಿನಗಳಲ್ಲಿ ಸಿಲಿಕಾನ್ ಸಿಟಿ ಜನರಲ್ಲಿ ಆತಂಕ ತಂದೊಡ್ಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸತತ ಕಾರ್ಯಾಚರಣೆ ನಂತರ ಮೂರು ದಿನಗಳ ನಂತರ ಸೆರೆಹಿಡಿದಿದ್ದಾರೆ. ಅರವಳಿಕೆ ಮದ್ದು ನೀಡಿದ ನಂತರವೂ ಅರೆಪ್ರಜ್ಞಾವಸ್ಥೆಯಲ್ಲಿದ್ದ ಚಿರತೆ ಪಶುವೈದ್ಯರ ಮೇಲೂ ದಾಳಿ ನಡೆಸಿತ್ತು. ಕೊನೆಗೂ ಹರಸಾಹಸಪಟ್ಟು ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು. ಆದರೆ ಚಿರತೆ ಸಾವನ್ನಪ್ಪಿದೆ ಎನ್ನಲಾಗಿದೆ. ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಅಧಿಕಾರಿಗಳು ಗುಂಡಿನ ದಾಳಿ ನಡೆಸಿದ್ದರು. ಈ ಹಿನ್ನೆಲೆ ಚಿರತೆ ಸಾವನ್ನಪ್ಪಿದೆ ಎಂದು ಶಂಕಿಸಲಾಗಿದೆ.
ನಡೆದಿದ್ದೇನು?: ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಚಿರತೆಯೊಂದು ಓಡಾಡಿತ್ತು. ರಾತ್ರಿ 11 ಗಂಟೆಗೆ ಕಾಂಪೌಂಡ್ ಗೋಡೆ ಜಿಗಿದು ಓಡಿದ್ದನ್ನು ಪರಪ್ಪನ ಅಗ್ರಹಾರ ಲಾ ಅಂಡ್ ಆರ್ಡರ್ ಪೊಲೀಸರು ಗಮನಿಸಿದ್ದರು. ಮರುದಿನ ಅಲ್ಲಿ ಚಿರತೆಯ ಹೆಜ್ಜೆಗಳು ಪತ್ತೆಯಾಗಿತ್ತು. ಕಡೆಂಜಾ ಅಪಾರ್ಟ್ಮೆಂಟ್‌ನಲ್ಲಿ ಮಧ್ಯಾಹ್ನದ ಹೊತ್ತಿಗೆ ಚಿರತೆ ಮೆಟ್ಟಿಲು ಹತ್ತಿ ಹೋಗುವುದು ಸಿಸಿ ಟಿವಿಯಲ್ಲೂ ಸೆರೆಯಾಗಿತ್ತು.
ಬೆಂಗಳೂರಿನ ಆನೇಕಲ್ ತಾಲೂಕಿನ ಬೊಮ್ಮನಹಳ್ಳಿಯ ಕೂಡ್ಲು ಗೇಟ್ ಬಳಿ ಇರುವ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದಲ್ಲಿರುವ ಪಾಳು ಬಿದ್ದ ಕಟ್ಟಡದಲ್ಲಿ ಚಿರತೆ ಇರುವಿಕೆ ಕುರಿತು ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದರು. ಕಳೆದ ಮೂರು ದಿನಗಳಿಂದ ಚಿರತೆ ಅರಣ್ಯ ಅಧಿಕಾರಿಗಳ ಕಣ್ಣು ತಪ್ಪಿಸಿ ಓಡಾಡುತ್ತುತ್ತ.
ಇಂದು ಅರಣ್ಯ ಇಲಾಕೆ ಸಿಬ್ಬಂದಿ ಚಿರತೆಗೆ ಅರವಳಿಕೆ ಇಂಜೆಕ್ಷನ್ ನೀಡಿದ್ದರು, ಆದರೂ ಚಿರತೆ ಸೆರೆ ವಿಳಂಭವಾಗಿತ್ತು. ಸತತ ಮೂರು ದಿನಗಳ ಕಾರ್ಯಾಚರಣೆ ನಂತರ ಚಿರತೆಯನ್ನು ಸರೆ ಹಿಡಿಯಲಾಗಿತ್ತು. ಆದರೆ ಇದೀಗ ಚಿರತೆ ಸಾವನ್ನಪ್ಪಿದೆ ಎನ್ನುವ ಸುದ್ದಿ ಕೂಡಾ ಹರಿದಾಡುತ್ತಿದೆ.