ಬಳ್ಳಾರಿ : ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‌ಗೆ ಒಳಗಾಗಿದ್ದ ಕೂಡ್ಲಿಗಿಯ ಸುಮಯಾ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಇದರಿಂದ ಬಾಣಂತಿಯರ ಸರಣಿ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಸುಮಯಾ ಅವರು ನವೆಂಬರ್ 11ರಂದು ಹೆರಿಗೆಗೆಂದು ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅಂದೇ ಅವರಿಗೆ ಸಿಸೇರಿಯನ್ ಮಾಡಲಾಗಿತ್ತು. ಆ ಬಳಿಕ ತೀವ್ರ ಅಸ್ವಸ್ಥಗೊಂಡ ಅವರನ್ನು ಮರುದಿನ ಬಳ್ಳಾರಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ (ಬಿಮ್ಸ್) ದಾಖಲಿಸಲಾಗಿತ್ತು. ಸುಮಯಾ ಅವರು ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.